ಬುಧವಾರ, ಜೂನ್ 16, 2021
27 °C
ಹೆಸರು ನೋಂದಾಯಿಸಲು ಸೂಚನೆ, ಸರತಿಯಲ್ಲಿ ಕಾಯಿಸುವಂತಿಲ್ಲ

ಅಂಗವಿಕಲರು, ಹಿರಿಯ ನಾಗರಿಕರಿಗೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ 18 ವರ್ಷ ಮೇಲ್ಪಟ್ಟ ಅಂಗವಿಕಲರು ಹಾಗೂ 60 ವರ್ಷ ಮೇಲ್ಪಟ್ಟವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು ಅಗತ್ಯವಿದ್ದು, ಲಸಿಕೆಗಾಗಿ ಹೆಸರು ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ.

Co-WIN App ಅಥವಾ www.cowin.gov.in ಮೂಲಕ ತಮ್ಮ ಹೆಸರು ನೋಂದಾಯಿಸಿಕೊಂಡು, ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ. ಹಾಗೂ ಲಸಿಕಾ ಕೇಂದ್ರಗಳಲ್ಲಿ ಎಲ್ಲ 18 ವರ್ಷ ಮೇಲ್ಪಟ್ಟ ಅಂಗವಿಕಲರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ  ಕೋವಿಡ್ ಲಸಿಕೆ ನೀಡುವುದಕ್ಕೆ ಆದ್ಯತೆ ಮೇರೆಗೆ ಕಾರ್ಯವಿಧಾನ ರೂಪಿಸಿ ಅಂತಹವರನ್ನು ವಾಕ್ಸಿನೇಷನ್‌ಗಾಗಿ ಸರತಿ ಸಾಲಿನಲ್ಲಿ ಕಾಯಿಸುವಂತಿಲ್ಲ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನಲ್ಲಿ ತಾಲ್ಲೂಕು ನೋಡಲ್ ಅಧಿಕಾರಿಗಳಾಗಿ ನೇಮಿಸಿರುವ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹಿರಿಯ ಮೇಲ್ವಿಚಾರಕರು, ಅಥವಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇಲಾಖೆಯಿಂದ ನೇಮಿಸಿರುವ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಪ್ರತಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬೇಕು.

ಎಂಆರ್‌ಡಬ್ಲೂಗಳಾದ ಕೊಪ್ಪಳ ತಾಲ್ಲೂಕಿನ ಜಯಶ್ರೀ ಮೊ- 99801 26391, ಗಂಗಾವತಿ- ಮಂಜುಳಾ 79753 98202, ಯಲಬುರ್ಗಾ- ಬಸನಗೌಡ 99648 03047, ಕುಷ್ಟಗಿ- 99163 08585 ಹಾಗೂ ಇಲಾಖೆಯ ಸಲಹಾ ಕೇಂದ್ರ ಮಹ್ಮದ್ ರಫೀಕ್ - 97424 41572, ಅನ್ನಕ್ಕ ಉಪ್ಪಾರ- 80952 51135, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಮಾಲೋಚಕರಾದ ಹೀನಾ ಕೌಸರ್- 76195 53924, ಆಪ್ತ ಸಮಾಲೋಚಕರಾದ ಮಲ್ಲಿಕಾರ್ಜುನ ಆರೇರ್ 86607 94417, ಅನಿತಾ ಜಿ. 7349507769, ದೇವಕಿ- 73376 67509 ಅವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದು ತುರ್ತಾಗಿ ಆದ್ಯತೆ ಮೇರೆಗೆ ಲಸಿಕೆ ಪಡೆಯಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.