ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವೈಚಾರಿಕೆ ಚಿಂತನೆ ಒಳಗೊಂಡ ವಚನ ಸಾಹಿತ್ಯ’

Last Updated 8 ಜುಲೈ 2022, 14:14 IST
ಅಕ್ಷರ ಗಾತ್ರ

ಕೊಪ್ಪಳ: ‘ಫ.ಗು.ಹಳಕಟ್ಟಿಯವರ ವಚನ ಸಾಹಿತ್ಯ ಇಂದಿಗೂ ಸರ್ವಜನರಿಗೆ ಬಹು ಉಪಯುಕ್ತವಾದ ವೈಚಾರಿಕ ಚಿಂತನೆಗಳನ್ನು ಒಳಗೊಂಡಿದೆ’ ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಹೇಳಿದರು.

ನಗರದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ವೇದಿಕೆ ಸಹಯೋಗದಲ್ಲಿ ನಡೆದ ಹಳಕಟ್ಟಿಯವರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ ಅಧ್ಯಕ್ಷ ಹನುಮಂತಪ್ಪ ಅಂಡಗಿ ಚಿಲವಾಡಗಿ ಮಾತನಾಡಿ ‘ಮನೆ, ಮಠ, ಜಗುಲಿಗಳಲ್ಲಿ ಪೂಜಿಸುತ್ತಿದ್ದ ತಾಡೋಲೆಗಳನ್ನು ಹುಡುಕಿ ತಂದು, ವಚನಗಳನ್ನು ಮುದ್ರಿಸಿದ ಕೀರ್ತಿ ವಚನ ಪಿತಾಮಹ ಫ.ಗು.ಹಳಕಟ್ಟಿಯವರಿಗೆ ಸಲ್ಲುತ್ತದೆ. ಸರ್ಕಾರ ಜುಲೈ 2ರಂದು ‘ವಚನ ಸಾಹಿತ್ಯ ಸಂರಕ್ಷಣಾ ದಿನ’ವಾಗಿ ಘೋಷಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಿದೆ’ ಎಂದರು.

ಡಾ.ಮಹಾಂತೇಶ ಮಲ್ಲನಗೌಡರ, ಕದಳಿ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷೆ ನಿರ್ಮಲಾ ವಿಶ್ವನಾಥ ಬಳ್ಳೊಳ್ಳಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷೆ ಸಾವಿತ್ರಿ ಮುಜುಮದಾರ, ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ಗೋನಾಳ, ಪ್ರಧಾನ ಕಾರ್ಯದರ್ಶಿ ಉಮೇಶಬಾಬು ಸುರ್ವೆ, ನಗರಸಭೆ ಸದಸ್ಯೆ ಬಸಮ್ಮ ದಿವಟರ, ವಿಜಯಾ ಬಳ್ಳೊಳ್ಳಿ, ವಾಣಿಶ್ರಿ ಮಠದ ಪಾಲ್ಗೊಂಡಿದ್ದರು.

ಪಾರ್ವತಿ ಪಾಟೀಲ, ಹೇಮಾ ಬಳ್ಳಾರಿ, ಸೌಮ್ಯಾ ನಾಲವಾಡ, ಶಿಲ್ಪಾ ಸಸಿಮಠ, ಮುಖ್ಯ ಶಿಕ್ಷಕಿ ರೇಣುಕಾ ಸುರ್ವೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT