ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಜಪೇಯಿ ಜನ್ಮದಿನಾಚರಣೆ

Last Updated 26 ಡಿಸೆಂಬರ್ 2019, 10:59 IST
ಅಕ್ಷರ ಗಾತ್ರ

ಗಂಗಾವತಿ: ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತ ಶತ್ರುಗಳಾಗಿದ್ದರು ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಅವರು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಅನೇಕ ಯೋಜನೆಗಳನ್ನು ಅನುಷ್ಠಾಗೊಳಿಸಿದ್ದರು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಇವರ ಅವಧಿಯಲ್ಲಿ ಆಗಿತ್ತು ಎಂದರು.

ವಾಜಪೇಯಿ ಅವರು ಕನಸುಗಳನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ನನಸಾಗಿಸಿದ್ದಾರೆ ಎಂದು
ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿಂಗನಾಳ ವಿರುಪಾಕ್ಷಪ್ಪ, ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ, ಚನ್ನಪ್ಪ ಮಳಿಗಿ, ವೀರೇಶ ಬಲಕುಂದಿ, ನಗರಸಭೆ ಸದಸ್ಯರು ಮತ್ತು ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT