ಸಚಿವರಿಂದ ವಾಲ್ಮೀಕಿ ಭವನ ಕಾಮಗಾರಿ ವೀಕ್ಷಣೆ

ಬುಧವಾರ, ಜೂನ್ 26, 2019
28 °C

ಸಚಿವರಿಂದ ವಾಲ್ಮೀಕಿ ಭವನ ಕಾಮಗಾರಿ ವೀಕ್ಷಣೆ

Published:
Updated:
Prajavani

ಕೊಪ್ಪಳ: ನಗರದ ಕಿನ್ನಾಳ ರಸ್ತೆಯ ಅಗಡಿ ಬಡಾವಣೆಯಲ್ಲಿರುವ ವಾಲ್ಮೀಕಿ ಸಮುದಾಯ ಭವನದ ಕಟ್ಟಡ ನಡೆಯುವ ಸ್ಥಳಕ್ಕೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ, ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು.

ಶಾಸಕ, ಸಂಸದೀಯ ಕಾರ್ಯದರ್ಶಿ ಕೆ.ರಾಘವೇಂದ್ರ ಹಿಟ್ನಾಳ್ ಸಚಿವರಿಗೆ ಮಾಹಿತಿ ನೀಡಿ, ಶಾಸಕರ ಅನುದಾನದಲ್ಲಿ ಅಂದಾಜು ₹ 49 ಲಕ್ಷ ಹಣದಲ್ಲಿ ಸುಮಾರು 110 ಅಡಿ ಅಗಲ, 208 ಅಡಿ ಉದ್ದ ಜಾಗದಲ್ಲಿ ನಿರ್ಮಾಣ ಮಾಡುತ್ತಿರುವ ಸುಮಾರು ₹ 3.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದ್ದು, ₹ 1.50 ಕೋಟಿ ಹಣ ಬಿಡುಗಡೆ ಆಗಿದ್ದು, ಬಾಕಿ ₹2 ಕೋಟಿ ರೂಪಾಯಿ ಹಣ ಬಿಡುಗಡೆಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಸಮಾಜದ ಪರವಾಗಿ ಈ ವೇಳೆ ಸಚಿವರನ್ನು ಸನ್ಮಾನಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮತ್ತು ಶೇ 7.5 ಮೀಸಲಾತಿ ನೀಡುವ ಕುರಿತು ಸಂಪುಟದಲ್ಲಿ ಚರ್ಚಿಸುವಂತೆ ಮನವಿ ಸಲ್ಲಿಸಿದರು.

'ಸಮಾಜದ ಪ್ರತಿಯೊಬ್ಬರೂ ಭವನವನ್ನು ಮುತುವರ್ಜಿ ವಹಿಸಿ ಉತ್ತಮವಾಗಿ ನಿರ್ಮಿಸಲು ಸಹಕರಿಸಬೇಕು. ನಂತರ ಅದನ್ನು ಸಮುದಾಯ ಮತ್ತು ಸಮಾಜಕ್ಕೆ ಒಳ್ಳೆಯ ರೀತಿಯ ಉಪಯೋಗವಾಗುವಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾ ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಟಿ. ರತ್ನಾಕರ, ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ರಾಮಣ್ಣ ಕಲ್ಲನವರ, ವಾಲ್ಮೀಕಿ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಡೊಣ್ಣಿ, ತಾಲೂಕು ಮಹಾಸಭಾ ಅಧ್ಯಕ್ಷ ಶರಣಪ್ಪ ನಾಯಕ್, ಹನುಮಂತಪ್ಪ ಗುದಗಿ, ಶಿವಮೂರ್ತಿ ಗುತ್ತೂರು, ಮಂಜುನಾಥ್ ಜಿ. ಗೊಂಡಬಾಳ, ಯಮನೂರಪ್ಪ ನಾಯಕ್, ಅನುಸೂಯಾ ವಾಲ್ಮೀಕಿ, ಉಮೇಶ್ ವಾಲ್ಮೀಕಿ, ನೀಲಪ್ಪ ಬಾವಿಕಟ್ಟಿ, ವಿರುಪಾಕ್ಷಪ್ಪ, ಮಾರ್ಕಂಡಪ್ಪ ಕಲ್ಲನವರ್, ನಾಗರಾಜ ಕಿಡದಾಳ್, ಮಲ್ಲಪ್ಪ ಬೇಲೇರಿ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !