ಮಂಗಳವಾರ, ಡಿಸೆಂಬರ್ 1, 2020
18 °C

ಸಂಭ್ರಮದ ವಾಲ್ಮೀಕಿ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ತಾಲ್ಲೂಕಿನ ಹಿರೇಖೇಡ ಗ್ರಾಮದ ವಾಲ್ಮೀಕಿ ನಾಯಕ ಸಮಾಜದವರು ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರ, ಸಂಭ್ರಮದಿಂದ ಆಚರಿಸಿದರು.

ಗ್ರಾಮದ ವಿವಿಧ ಬೀದಿಗಳಲ್ಲಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಿತು.

ಶಾಸಕ ಬಸವರಾಜ ದಢೇಸೂಗೂರು ಮಾತನಾಡಿ,‘ದೇಶದ ಮಹಾನ್ ಕೃತಿಯಾಗಿರುವ ರಾಮಾಯಣವನ್ನು ವಾಲ್ಮೀಕಿ ಸಂಸ್ಕೃತದಲ್ಲಿ ಬರೆದ ಕಾರಣ ಅವರಿಗೆ ಆದಿಕವಿ ಎಂದು ಕರೆಲಾಗುತ್ತಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹನುಮೇಶ ನಾಯಕ ಅವರು ಮಾತನಾಡಿದರು.

ವಾಲ್ಮೀಕಿ ಸಮಾಜದ ಗುರುಗಳಾದ ರಾಜಾ ಉಡುಚೇಂದ್ರ ನಾಯಕ, ಎಪಿಎಂಸಿ ಮಾಜಿ ನಾಮ ನಿರ್ದೇಶಕ ಈಶಪ್ಪ ಹೊಸ್ಗೇರ, ಜಿಲ್ಲಾ ಹಾಲುಮತ ಸಮಾಜದ ಮಾಜಿ ಅಧ್ಯಕ್ಷ ಸಿದ್ದಪ್ಪ ನೀರ್ಲೂಟಿ, ಬಿಜೆಪಿ ಎಸ್.ಟಿ ಮೋರ್ಚಾ ಅಧ್ಯಕ್ಷ ಗ್ಯಾನಪ್ಪ ಗಾಣದಾಳ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗುರುನಾಥಪ್ಪ ಪ್ರಮುಖರಾದ ರಮೇಶ ನಾಡಗೇರ, ಸಣ್ಣ ಸಿದ್ದೇಶ್ವರ, ವಿರುಪಣ್ಣ ಜನಾದ್ರಿ, ಗಿಡ್ಡ ಬಾರೇಶ ಹಾಗೂ ಬಾರೆಪ್ಪ ನಡಲಮನಿಇದ್ದರು.

ವಾಲ್ಮೀಕಿ ಭಾವಚಿತ್ರವನ್ನು ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮಾಡಲಾಯಿತು. ಬಾಲಕರು ವೇಷಭೂಷಣ ಧರಿಸಿ ಗಮನ ಸೆಳೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.