ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ | ವಾಲ್ಮೀಕಿ ನಾಯಕ ಮಹಾಸಭಾ; 22ರಂದು ಮಹತ್ವದ ಸಭೆ

Published : 18 ಸೆಪ್ಟೆಂಬರ್ 2024, 14:35 IST
Last Updated : 18 ಸೆಪ್ಟೆಂಬರ್ 2024, 14:35 IST
ಫಾಲೋ ಮಾಡಿ
Comments

ಕೊಪ್ಪಳ: ‘ಜಿಲ್ಲೆಯಲ್ಲಿ ವಾಲ್ಮೀಕಿ ನಾಯಕ ಸಮಾಜದ ಸಂಘಟನೆ ಕುಂಠಿತಗೊಂಡಿದ್ದು, ಸಮಾಜದ ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ನಕಲಿ ಜಾತಿ ಪ್ರಮಾಣಪತ್ರದ ಹಾವಳಿ ಹೆಚ್ಚಾಗಿದೆ. ಆದರೂ ನಮ್ಮ ಮಹಾಸಭಾ ನಿಷ್ಕೃಯವಾಗಿದೆ. ಆದ್ದರಿಂದ ಈಗಿರುವ ಅಧ್ಯಕ್ಷ ರತ್ನಾಕರ ಟಿ. ಬದಲು ಹೊಸ ಸಮಿತಿ ರಚಿಸುವ ಕುರಿತು ಚರ್ಚಿಸಲು ಸೆ. 22ರಂದು ಬೆಳಿಗ್ಗೆ 10.30ಕ್ಕೆ ವಾಲ್ಮೀಕಿ ಸಮುದಾಯ ಭವನದಲ್ಲಿ ಸಭೆ ಕರೆಯಲಾಗಿದೆ’ ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ಯಮನೂರಪ್ಪ ನಾಯಕ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪ್ರಸ್ತುತ ಇರುವ ಸಮಿತಿ ರಚನೆಯಾಗಿ 12 ವರ್ಷಗಳಾಗಿದ್ದು, ರತ್ನಾಕರ ಅಧ್ಯಕ್ಷರಾಗಿದ್ದರು. ಅವರು ತಮ್ಮ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಆದ್ಯತೆ ಕೊಡುತ್ತಿದ್ದು, ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಒಂದೇ ಒಂದು ಮಹಾಸಭೆ ನಡೆಸಿಲ್ಲ. ಸಮಾಜದ ಸಂಘಟನೆ ಬೇಕು ಬೇಡಗಳ ಬಗ್ಗೆ ಚರ್ಚಿಸಿಲ್ಲ’ ಎಂದು ದೂರಿದರು.

‘ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದರೂ ಜಿಲ್ಲೆಯ ಮಹಾಸಭಾದಿಂದ ಒಂದೇ ಒಂದು ಹೋರಾಟ ನಡೆದಿಲ್ಲ. ಜಿಲ್ಲೆಯಲ್ಲಿ ಹೊಸ ಸಮಿತಿ ರಚಿಸುವ ಬಗ್ಗೆ ಎಲ್ಲ ತಾಲ್ಲೂಕುಗಳ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಲಾಗುವುದು. ಸಂಘಟನೆ ಚುರುಕುಗೊಳಿಸುವಂತೆ ರತ್ನಾಕರ ಅವರನ್ನು ಹಲವು ಬಾರಿ ಸಂಪರ್ಕಿಸಿದರೂ ಪ್ರಯೋಜನವಾಗಿಲ್ಲ’ ಎಂದರು.

ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಸುರೇಶ ಡೊಣ್ಣಿ, ಕೊಪ್ಪಳ ತಾಲ್ಲೂಕು ಅಧ್ಯಕ್ಷ ಶರಣಪ್ಪ ಎಚ್‌. ನಾಯಕ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರವಿಕುಮಾರ ಬನ್ನಿಕೊಪ್ಪ, ಸಮಾಜದ ಮುಖಂಡ ಶೇಖಣ್ಣ ಇಂದರಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT