ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಿಗೆ ವಾಹನ ವಿತರಣೆ

Last Updated 16 ನವೆಂಬರ್ 2020, 5:16 IST
ಅಕ್ಷರ ಗಾತ್ರ

ಯಲಬುರ್ಗಾ: ‘ಅಂಗವಿಕಲರ ಕಲ್ಯಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳ ಸದುಪಯೋಗ ಪಡೆದು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿಗೊಳ್ಳಬೇಕು’ ಎಂದು ಶಾಸಕ ಹಾಲಪ್ಪ ಆಚಾರ ಸಲಹೆ ನೀಡಿದರು.

ಪಟ್ಟಣದಲ್ಲಿ ಶನಿವಾರ ಅಂಗವಿಕಲರಿಗೆ ವಾಹನ ವಿತರಣೆ ಮಾಡಿ ಮಾತನಾಡಿದರು.

ಇತರರಂತೆ ಸುಂದರ ಹಾಗೂ ನೆಮ್ಮದಿಯ ಬದುಕು ಕಟ್ಟಿಕೊಳ್ಳುವುದಕ್ಕೆ ಸರ್ಕಾರ ನೆರವು ನೀಡುತ್ತಿದೆ. ಹಾಗೆಯೇ ಸಂಘ ಸಂಸ್ಥೆಗಳು ಕೂಡ ಪ್ರೋತ್ಸಾಹಿಸುತ್ತಿವೆ. ಮೀಸಲಾತಿ ಕಲ್ಪಿಸಿಕೊಡುವ ಮೂಲಕ ಸರ್ಕಾರ ಬೆಂಬಲಿಸುತ್ತಿದೆ. ಅದನ್ನು ಉಪಯೋಗಿಸಿಕೊಂಡು ಮುಖ್ಯವಾಹಿನಿಯಲ್ಲಿ ಅಗ್ರ ಸ್ಥಾನದಲ್ಲಿರಬೇಕು ಎಂದರು.

ತಹಶೀಲ್ದಾರ್ ಶ್ರೀಶೈಲ ತಳವಾರ ಮಾತನಾಡಿ,‘22 ಜನರಿಗೆ ವಾಹನ ವಿತರಿಸಲಾಗುತ್ತಿದೆ. ಕಡ್ಡಾಯವಾಗಿ ಚಾಲನಾ ಪರವಾನಿಗೆ ಪಡೆದುಕೊಳ್ಳಬೇಕು’ ಎಂದು ಕಿವಿ ಮಾತು ಹೇಳಿದರು.

ತಾ.ಪಂ ಅಧ್ಯಕ್ಷೆ ಲಕ್ಷ್ಮೀ ಗೌಡರ, ತಾ.ಪಂ ಸದಸ್ಯ ಶರಣಪ್ಪ ಈಳಗೇರ, ಪ.ಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸದಸ್ಯರಾದ ಅಶೋಕ ಅರಕೇರಿ, ಕಳಕಪ್ಪ ತಳವಾರ, ವಸಂತಕುಮಾರ ಭಾವಿಮನಿ, ರೇವಣಪ್ಪ ಹಿರೇಕುರಬರ, ಮುಖಂಡರಾದ ಸಿ.ಎಚ್.ಪಾಟೀಲ, ಸಿದ್ರಾಮೇಶ ಬೇಲೇರಿ, ಹಂಚ್ಯಾಳಪ್ಪ ತಳವಾರ,ವೀರಣ್ಣ ಹುಬ್ಬಳ್ಳಿ, ಕಳಕಪ್ಪ ಕಂಬಳಿ, ಈರಪ್ಪ ಬಣಕಾರ ಹಾಗೂ ಬಸವನಗೌಡ ಬನಪ್ಪಗೌಡ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT