ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಜಾಗೃತಿ: ಭಾರತ ನಕ್ಷೆ ಮಾದರಿಯ ಮಾನವ ಸರಪಳಿ

Last Updated 23 ನವೆಂಬರ್ 2021, 12:19 IST
ಅಕ್ಷರ ಗಾತ್ರ

ಕೊಪ್ಪಳ: ಮತದಾರರ ವಿಶೇಷ ನೋಂದಣಿ ಅಭಿಯಾನದ ಪ್ರಯುಕ್ತ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಭಾರತ ನಕ್ಷೆ ಮಾದರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಯಿತು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ‘ನಮ್ಮ ಮತದಾರರನ್ನು ಅಧಿಕಾರಯುಕ್ತ, ಜಾಗರೂಕ, ಸುರಕ್ಷಿತ ಮತ್ತು ಮಾಹಿತಿಯುಕ್ತರನ್ನಾಗಿ ಮಾಡುವುದು’ ಎಂಬ ಘೋಷವಾಕ್ಯದೊಂದಿಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

200x180 ಅಡಿ ಉದ್ದಗಲದಲ್ಲಿ ಭಾರತ ನಕ್ಷೆ ಮಾದರಿಯಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ವಿವಿಧ ಶಾಲಾ–ಕಾಲೇಜುಗಳ ಸುಮಾರು 5ಸಾವಿರಕ್ಕೂಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

‘ವೋಟರ್ ಹೆಲ್ಪ್‌ಲೈನ್‌ ಆ್ಯಪ್’ ವಾಕ್ಯದ ಮಾದರಿಯಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ಆ್ಯಪ್ ಬಗ್ಗೆ ಜಾಗೃತಿ ಮೂಡಿಸಿದ್ದು ಗಮನಸೆಳೆಯಿತು.

ಡ್ರೋನ್‌ ಮೂಲಕ ಇದನ್ನು ಸೆರೆಹಿಡಿಯಲಾಯಿತು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆಬಿ.ಫೌಜಿಯಾ ತರನ್ನುಮ್ ಮತದಾರರ ವಿಶೇಷ ನೋಂದಣಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ತಾ.ಪಂ.ಅಧಿಕಾರಿ ಕೆ.ಮಲ್ಲಿಕಾರ್ಜುನ್,ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ, ಡಿಡಿಪಿಯು ರವಿಕುಮಾರ ಬಿ.ಜಿ., ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT