ಗಂಗಾವತಿ (ಕೊಪ್ಪಳ ಜಿಲ್ಲೆ): ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡುವಾಗ ಬಹುತೇಕ ಕುರ್ಚಿಗಳು ಖಾಲಿಯಾಗಿದ್ದವು. ತಮಗೆ ಜನಬೆಂಬಲ ಸಿಗದ ಕಾರಣಕ್ಕೆ ಕಾರ್ಯಕರ್ತರಿಗೆ ಹಣ ಕೊಟ್ಟು ಜೈಕಾರ ಹಾಕಿಸಿಕೊಳ್ಳಬೇಕಾದ ದುಸ್ಥಿತಿಗೆ ಮುಖ್ಯಮಂತ್ರಿ ಬಂದಿದ್ದಾರೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ತಾಲ್ಲೂಕಿನ ಮರಳಿ ಸಮೀಪದಲ್ಲಿ ಭಾನುವಾರ ನಡೆದ ಪಕ್ಷದ ಅವಲೋಕನಾ ಸಭೆ ವೇಳೆ ಮಾತನಾಡಿ ‘ವೇದಿಕೆ ಮುಂದೆ ಅಲ್ಲಿಷ್ಟು, ಇಲ್ಲಿಷ್ಟು ಬಾಡಿಗೆ ಜನರು ಸಿದ್ದರಾಮಯ್ಯ ಅವರ ಫೋಟೊ ಹಿಡಿದುಕೊಂಡಿದ್ದರು. ಸಿದ್ದರಾಮಯ್ಯ ಜನಪರ ಆಡಳಿತ ಕೊಟ್ಟಿದ್ದರೆ ಅವರೇ ಬಾಡಿಗೆ ಹಾಗೂ ಕೈಗೆ ಭಾವಚಿತ್ರ ಕೊಟ್ಟು ಜಯಕಾರ ಹಾಕಿಸಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ’ ಎಂದು ದೂರಿದರು.

‘ರಾಜ್ಯ ರಾಜಕಾರಣದಲ್ಲಿ ನವೆಂಬರ್ ಅಥವಾ ಅದಕ್ಕೂ ಮೊದಲು ಕ್ರಾಂತಿಯಾಗುವುದು ಖಚಿತವಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಸುಳಿವು ನೀಡಿದ್ದಾರೆ. ರಾಜ್ಯ ಸರ್ಕಾರದ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರುವಂತೆ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಸವಾಲು ಹಾಕಿದ್ದಾರೆ. ಅವರು ಮೊದಲು ಕಾಂಗ್ರೆಸ್ ಪಕ್ಷದ ಶಾಸಕರನ್ನು ಕರೆದು ಅವರು ಎತ್ತಿರುವ ಪ್ರಶ್ನೆಗೆ ಉತ್ತರ ಕೊಡಲಿ. ನಂತರ ವಿರೋಧ ಪಕ್ಷಗಳಿಗೆ ಸವಾಲು ಹಾಕಲಿ’ ಎಂದು ತಿರುಗೇಟು ನೀಡಿದರು.
.ಸಾಧನಾ ಸಮಾವೇಶ | ಸಿಎಂಗೆ ತವರು ನೆಲದ ಬಲ; ರ್ಯಾಂಪ್ನಲ್ಲಿ ನಡೆದು ಬಂದ ನಾಯಕರು.'ನಾವಿಬ್ಬರೂ ಒಂದೇ': ಮುನಿಸು ಮರೆತು ಒಂದಾದ ಶ್ರೀರಾಮುಲು, ಜನಾರ್ದನ ರೆಡ್ಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.