ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿಗಿ: ಸುರಕ್ಷಿತ ಅಂತರ ಮರೆತ ಭಕ್ತರು

ದೇವಸ್ಥಾನ ಮುಂಭಾಗದ ವ್ಯಾಪಾರಿ ಮಳಿಗೆಗಳಲ್ಲಿ ಜನಜಂಗುಳಿ
Last Updated 15 ಜುಲೈ 2021, 5:10 IST
ಅಕ್ಷರ ಗಾತ್ರ

ಹುಲಿಗಿ (ಮುನಿರಾಬಾದ್): ಇಲ್ಲಿನ ಪ್ರಸಿದ್ಧ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಬಂದ ಭಕ್ತರು ಕೋವಿಡ್ ಮಾರ್ಗಸೂಚಿ ಪಾಲಿಸದೆ ಖರೀದಿಯಲ್ಲಿ ನಿರತರಾಗಿದ್ದ ದೃಶ್ಯಗಳು ಮಂಗಳವಾರ ಕಂಡುಬಂದವು.

ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿರುವ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ಕಳೆದ ವಾರದಿಂದ ಭಕ್ತರಿಗೆಸುರಕ್ಷಿತ ಅಂತರ ಕಾಪಾಡಿಕೊಂಡು ದರ್ಶನ ಪಡೆಯಲು ಕಲ್ಪಿಸಲಾಗಿದೆ. ದೇವಿಯ ದರ್ಶನಕ್ಕೆ ಬ್ಯಾರಿಕೇಡ್ ಹಾಕಿ ಸರದಿ ಸಾಲಿನಲ್ಲಿ ಹೋಗಲು ವ್ಯವಸ್ಥೆ ಮಾಡಲಾಗಿದೆ.

ದೇವಸ್ಥಾನ ಮುಂಭಾಗದ ವ್ಯಾಪಾರಿ ಮಳಿಗೆಗಳಲ್ಲಿ ಮತ್ತು ಡಾರ್ಮೆಟರಿ ಸಭಾಂಗಣದಲ್ಲಿ ಜನಜಂಗುಳಿ ಕಂಡುಬಂದಿದ್ದು, ಬಹುತೇಕ ಭಕ್ತರು ಮಾಸ್ಕ್ ಕೂಡ ಧರಿಸಿರಲಿಲ್ಲ. ಮಹಿಳೆಯರು ಮತ್ತು ಮಕ್ಕಳ ಸಮೇತ ಬರುವ ಭಕ್ತರು ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿಲ್ಲ.

ಸೋಂಕು ಹರಡುವ ಭೀತಿ: ರಾಜ್ಯದ ವಿವಿಧ ಜಿಲ್ಲೆಗಳಿಂದ ಅಲ್ಲದೆ, ತಮಿಳುನಾಡು ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದಿಂದ ದೇವಿಯ ಭಕ್ತರು ಅಪಾರ ಸಂಖ್ಯೆಯಲ್ಲಿ ಬರುತ್ತಾರೆ. ಕೊರೊನಾ ಸೋಂಕಿನ ಹಾವಳಿ ಇನ್ನೂ ಕಡಿಮೆಯಾಗದ ಪರಿಣಾಮ ಇಲ್ಲಿನ ಜನರಲ್ಲಿ ಆತಂಕ ಮನೆಮಾಡಿದೆ.

ಸಾಮಾನ್ಯವಾಗಿ ಮಂಗಳವಾರ ಮತ್ತು ಶುಕ್ರವಾರ ಹಾಗೂ ಹುಣ್ಣಿಮೆ ದಿನಗಳಂದು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಬರುತ್ತಾರೆ. ಪೊಲೀಸರು ಮತ್ತು ದೇವಸ್ಥಾನದ ಸಿಬ್ಬಂದಿ ಎಲ್ಲರನ್ನೂ ನಿಯಂತ್ರಿಸುವುದು ಕಷ್ಟ ಸಾಧ್ಯ. ಜನರೇ ಸ್ವಯಂ ನಿಯಂತ್ರಣ, ಸ್ವಯಂ ಶಿಸ್ತು ಅಳವಡಿಸಿಕೊಳ್ಳುವುದು ಉತ್ತಮ ಎಂದು ದಾವಣಗೆರೆ ಜಿಲ್ಲೆಯಿಂದ ಆಗಮಿಸಿದ್ದ ಭಕ್ತರೊಬ್ಬರು ಅನಿಸಿಕೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT