ಭಾನುವಾರ, ಮೇ 22, 2022
28 °C

ಭಾಷಾ ಬೆಳವಣಿಗೆ ಬಯಸುವವರು ಅಧ್ಯಕ್ಷರಾಗಲಿ: ಹನುಮಂತಪ್ಪ ಅಂಡಗಿ ಚಿಲವಾಡಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ‘ಕನ್ನಡಿಗರ ಬಗ್ಗೆ ಪ್ರಾಮಾಣಿಕ ಕಳಕಳಿ ಇರುವವರು ಮತ್ತು ಕನ್ನಡ ಭಾಷೆ ಬೆಳವಣಿಗೆ ಬಯಸುವವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಬೇಕು’ ಎಂದು ಸಾಹಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಹನುಮಂತಪ್ಪ ಅಂಡಗಿ ಚಿಲವಾಡಗಿ ಹೇಳಿದರು.

‘ನನ್ನದು ಸಾಹಿತಿಗಳ, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಬಣ. ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳೆಲ್ಲರೂ ಸೇರಿ ಅವಿರೋಧವಾಗಿ ಆಯ್ಕೆ ಮಾಡಬೇಕು. ಸ್ಪರ್ಧಿಸಿದ ಅಭ್ಯರ್ಥಿಗಳೆಲ್ಲರೂ ಸೇರಿ ಪ್ರಚಾರ ಮಾಡಬೇಕು. ಇದರಿಂದ ಇತರ ಚುನಾವಣೆಗಳಿಗೆ ಮಾದರಿಯಾಗಲು ಸಾಧ್ಯವಾಗುತ್ತದೆ. ಆದರೆ, ಇತ್ತೀಚೆಗೆ ವ್ಯಕ್ತಿಗಳ ಹೆಸರಿನಲ್ಲಿ ಬಣಗಳು ಹುಟ್ಟಿಕೊಂಡಿರುವುದು ದುರದೃಷ್ಟಕರ ಸಂಗತಿ. ಸಂಘಟನೆಯ ಹೆಸರಿನಲ್ಲಿ ಸಾಹಿತಿಗಳಲ್ಲದವರು ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವುದು ನೋವಿನ ಸಂಗತಿ’ ಎಂದು ಹೇಳಿದರು.

‘ಕನ್ನಡಮ್ಮನ ಸೇವೆ ಮಾಡಲು ಚುನಾವಣೆ ಪ್ರಣಾಳಿಕೆ ಸಿದ್ದಪಡಿಸಿದ್ದು, ಕೊಪ್ಪಳದಲ್ಲಿ ಡಾ.ಸಿದ್ಧಯ್ಯ ಪುರಾಣಿಕರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಆರಂಭಿಸುವಂತೆ ಒತ್ತಾಯಿಸುತ್ತೇನೆ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಮಹಿಳಾ ಸಾಹಿತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತೇನೆ. ಯುವಬರಹಗಾರ ಕೃತಿಗಳನ್ನು ಪ್ರಕಟಿಸುವುದು ಸೇರಿ ಹಲವು ಕಾರ್ಯಕ್ರಮ ಆಯೋಜಿಸಬೇಕು ಎನ್ನುವುದು ನನ್ನ ಸಂಕಲ್ಪವಾಗಿದೆ. ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ಅಜೀವ ಸದಸ್ಯರು ನನಗೆ ಮತ ನೀಡಿ ಬಹುಮತದಿಂದ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸೈನಿಕ ಎಂ.ಬಿ.ಅಳವಂಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು