ಕುಕನೂರು: ‘ಭಾರತ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದದು’ ಎಂದು ಪ್ರಾಚಾರ್ಯ ಈಶಪ್ಪ ಮಳಗಿ ಹೇಳಿದರು.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.

ಮತದಾನ ಜನರ ಪ್ರಮುಖ ಹಕ್ಕು. ಪ್ರಜೆಗಳಿಂದ ಆಯ್ಕೆಯಾದ ಸರ್ಕಾರ ಜನರ ಆಶೋತ್ತರಗಳಂತೆಯೇ ನಡೆಯಬೇಕೆಂಬುದು ಸಂವಿಧಾನದ ನಿಯಮ ಎಂದರು. ತಮ್ಮ ಒಳಿತು ಬಯಸುವ ಜನ ನಾಯಕನನ್ನು ಆಯ್ಕೆ ಮಾಡಲು ಮತದಾನ ಪ್ರಕ್ರಿಯೆ ನಡೆಯುತ್ತದೆ. ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸುವು ದಕ್ಕಾಗಿಯೇ ಪ್ರತಿವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ ಎಂದರು.

ಉಪನ್ಯಾಸಕ ಮಂಜುನಾಥ ಅಂಗಡಿ ಮಾತನಾಡಿದರು. ಇತಿಹಾಸ ಉಪನ್ಯಾಸಕಿ ಸುಜಾತ, ಅರ್ಥಶಾಸ್ತ್ರ ಉಪನ್ಯಾಸಕ ಮಹಾಂತೇಶ ಹಂಡಿ ಹಾಗೂ ಕನ್ನಡ ಪಂಡಿತ ಜೀವನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.