ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

9ರ ಒಳಗೆ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ: ಗಂಗಾವತಿ ತಹಶೀಲ್ದಾರ್‌ ಮಹಾಂತಗೌಡ

Published 7 ಡಿಸೆಂಬರ್ 2023, 16:19 IST
Last Updated 7 ಡಿಸೆಂಬರ್ 2023, 16:19 IST
ಅಕ್ಷರ ಗಾತ್ರ

ಗಂಗಾವತಿ: ತಾಲ್ಲೂಕಿನ ಸಾಯಿನಗರದ ಬಳಿ ಇರುವ ಶ್ರೀಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ತಾಲ್ಲೂಕು ಸ್ವೀಪ್ ಸಮಿತಿಯಿಂದ ಹೊಸ ಮತದಾರರ ನೋಂದಣಿ ಹಾಗೂ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಜರುಗಿತು.

ಗ್ರೇಡ್-2 ತಹಶೀಲ್ದಾರ್‌ ಮಹಾಂತಗೌಡರ ಮಾತನಾಡಿ, 18 ವರ್ಷ ತುಂಬಿದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ಎಲ್ಲರ ಹಕ್ಕಾಗಿದ್ದು, ಚುನಾವಣೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಜತೆಗೆ ತಿದ್ದುಪಡಿ ಗಳಿದ್ದರೆ ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

ಡಿ.9ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಹಾಗೂ ಪರಿಷ್ಕರಣೆಗೆ ಅವಕಾಶವಿದ್ದು, ಮತದಾರರು ನಮೂನೆ 6 ಅರ್ಜಿಯನ್ನು ಭರ್ತಿಮಾಡಿ, ತಮ್ಮ ವಾರ್ಡ್ ಬಿಎಲ್ಒಗಳಿಗೆ ಸಲ್ಲಿಸಬೇಕು. ವೋಟರ್ ಹೆಲ್ಪ್‌ಲೈ ನ್ ಮೊಬೈಲ್ ಆ್ಯಪ್‌ನಲ್ಲಿ ಸಹ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದ ಉಪಯೋಗ ಪಡೆಯಬೇಕು ಎಂದರು.

ವೋಟರ್ ಹೆಲ್ಪಲೈನ್ ಮೊಬೈಲ್ ಆ್ಯಪ್‌ನಲ್ಲಿ ಅರ್ಜಿ ನೋಂದಣಿ ಬಗ್ಗೆ ಮಾಹಿತಿ ನೀಡಿದ ಚುನಾವಣಾ ವಿಭಾಗದ ಶಿರಸ್ತೇದಾರ ರವಿಕುಮಾರ ನಾಯಕವಾಡಿ, ಈಶಾನ್ಯ ಕರ್ನಾಟಕ ಪದವೀಧರರ ಚುನಾವಣೆಗೆ ಸಹ ಹೆಸರು ನೋಂದಾಯಿಸಲು ಡಿ.9 ರವೆರೆಗೆ ಅವಕಾಶವಿದೆ ಎಂದು ಹೇಳಿದರು.

ನಂತರ ಕಾಲೇಜಿನ ವಿದ್ಯಾರ್ಥಿಗಳಿಗೆ ನಮೂನೆ–6ರ ಅರ್ಜಿಗಳನ್ನು ವಿತರಿಸಲಾಯಿತು. ಕಾಲೇಜಿ‌ನ ಪ್ರಾಚಾರ್ಯ ಜಾಜಿ ದೇವೇಂದ್ರಪ್ಪ, ಕನ್ನಡ ವಿಭಾಗ ಮುಖ್ಯಸ್ಥೆ ಜಗದೇವಿ ಕಲಶೆಟ್ಟಿ, ಎನ್‌ಎಸ್‌ಎಸ್ ಘಟಕದ ಸಂಯೋಜಕ ರವಿಕಿರಣ್, ಉಪ ತಹಶೀಲ್ದಾರ ಅಬ್ದುಲ್ ರಹೆಮಾನ, ಶಿವಾನಂದ ನಾಯ್ಕರ್, ತಾ.ಪಂ ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ, ತಹಶೀಲ್ದಾರ ಕಚೇರಿ ಸಿಬ್ಬಂದಿ ಶ್ರೀಕಾಂತ, ದುರಗೇಶ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT