ಕೊಪ್ಪಳ: ‘ರೈತರ, ದೇವಸ್ಥಾನಗಳ ಹಾಗೂ ಸಾರ್ವಜನಿಕರ ಆಸ್ತಿಗಳನ್ನು ವಕ್ಫ್ ಎಂದು ನಮೂದಿಸಲಾಗಿದ್ದು, ಇದರ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದೇವೆ. ಡಿ. 6ರಂದು ಬೆಳಿಗ್ಗೆ 11.30ಕ್ಕೆ ಕಾರಟಗಿಯಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಹೇಳಿದರು.

ಪಕ್ಷದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ವಕ್ಫ್ ಎಂದು ನಮೂದು ಮಾಡಿದ ವಿಷಯವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿ ಮಾಡಲು ಮುಂದಾಗಿದೆ. ರಾಜ್ಯ ಬಿಜೆಪಿ ರಾಜ್ಯಾದ್ಯಂತ ಮೂರು ತಂಡಗಳಾಗಿ ಹೋರಾಟ ನಡೆಸುತ್ತಿದೆ. ಕಾರಟಗಿ ಹೋರಾಟದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವ ವಹಿಸುವರು’ ಎಂದು ತಿಳಿಸಿದರು.

‘ಮುಖ್ಯಮಂತ್ರಿ ಸೂಚನೆ ಹಿನ್ನೆಲೆಯಲ್ಲಿ ರೈತರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಆದರೆ ಇದುವರೆಗೂ ಯಾವ ಸ್ಪಷ್ಟನೆ ನೀಡಿಲ್ಲ. ಈ ವಿಷಯದಲ್ಲಿ ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು, ಇಲ್ಲವಾದರೆ ಜಮೀರ್ ಅಹ್ಮದ್ ಸಿ.ಎಂ. ಹೆಸರು ದುರಪಯೋಗ ಮಾಡಿಕೊಂಡಿದ್ದರೆ ಅವರನ್ನು ಸಂಪುಟದಿಂದ ಕೈ ಬಿಡಬೇಕು’ ಎಂದು ಆಗ್ರಹಿಸಿದರು.

‘ವಕ್ಫ್ ಆಸ್ತಿ ವಿರುದ್ಧ ಬಿಜೆಪಿ ಸದನದ ಒಳಗೆ ಹಾಗೂ ಹೊರಗಡೆ ಎರಡೂ ಕಡೆಯು ಹೋರಾಟ ಮಾಡುತ್ತಿದೆ. ಎಲ್ಲರನ್ನೂ ಒಳಗೊಂಡೇ ತಂಡ ರಚಿಸಲಾಗಿದೆ. ಬಿಜೆಪಿಯಲ್ಲಿ ಯಾವುದೇ ಬಣ ರಾಜಕಾರಣಕ್ಕೆ ಅವಕಾಶವಿಲ್ಲ. ಪಕ್ಷದ ವರಿಷ್ಠರ ಆದೇಶವೇ ಅಂತಿಮವಾಗಿದ್ದು, ವಿಜಯೇಂದ್ರ ಅವರ ಮಾರ್ಗದರ್ಶನದಲ್ಲಿಯೇ ನಮ್ಮ ಹೋರಾಟ ನಡೆಯುತ್ತವೆ’ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ, ಶಾಸಕರಾದ ದೊಡ್ಡನಗೌಡ ಪಾಟೀಲ್, ಜನಾರ್ದನ ರೆಡ್ಡಿ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಸಚಿವ ಹಾಲಪ್ಪ ಆಚಾರ್, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಮಾಜಿ ಶಾಸಕ ಪರಣ್ಣ ಮುನವಳ್ಳಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.