ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಕನೂರು: ನಿವೃತ್ತ ಯೋಧನಿಗೆ ಅದ್ದೂರಿ ಸನ್ಮಾನ

Published 2 ಜುಲೈ 2024, 14:43 IST
Last Updated 2 ಜುಲೈ 2024, 14:43 IST
ಅಕ್ಷರ ಗಾತ್ರ

ಕುಕನೂರು: ತಾಲ್ಲೂಕಿನ ಅರಕೇರಿ ಗ್ರಾಮದ ನಿವೃತ್ತ ಯೋಧ ಬಸವರಾಜ ಕೆಂಚರೆಡ್ಡಪ್ಪ ಬಾವಿಕಟ್ಟಿ ಅವರನ್ನು ಗ್ರಾಮಸ್ಥರ ಅದ್ದೂರಿಯಾಗಿ ಸ್ವಾಗತಿಸಿದರು.

ದುರ್ಗಾದೇವಿ ದೇವಸ್ಥಾನದ ಮುಂಭಾಗದಿಂದ ಆರಂಭವಾದ ತೆರೆದ ಜೀಪಿನ ಮೆರವಣಿಗೆ ಗ್ರಾಮದ ಮುಖ್ಯಬೀದಿಗಳಲ್ಲಿ ಸಂಚರಿಸಿತು. ಡೊಳ್ಳು ಕುಣಿತ ಮೆರುಗು ನೀಡಿತು. ವಿವಿಧ ವೇಷಧಾರಿಗಳು ಗಮನ ಸೆಳೆದರು.

‘ಗ್ರಾಮಸ್ಥರು ನೀಡಿದ ಸ್ವಾಗತ ನನ್ನ ಜೀವಮಾನದ ಮುಖ್ಯಘಟ್ಟವಾಗಿದೆ. ಜನರು ತೋರಿಸಿದ ಪ್ರೀತಿಯಿಂದ ಇಷ್ಟು ವರ್ಷ ದೇಶ ಕಾಯುವ ಕಾರ್ಯವನ್ನು ಮಾಡಿದ್ದು ಸಾರ್ಥಕ ಭಾವ ಮೂಡಿಸಿದೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಜನಪರ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ’ ಎಂದು ಯೋದ ಬಸವರಾಜ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT