ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಷ್ಟಗಿ: ಬೈಕ್‌ ಮಗುಚಿ ಮೃತಪಟ್ಟಿದ್ದ ಯೋಧನ ಅಂತ್ಯಕ್ರಿಯೆ

Published 22 ಡಿಸೆಂಬರ್ 2023, 16:07 IST
Last Updated 22 ಡಿಸೆಂಬರ್ 2023, 16:07 IST
ಅಕ್ಷರ ಗಾತ್ರ

ಕುಷ್ಟಗಿ: ಬೈಕ್‌ ಮಗುಚಿ ಮೃತಪಟ್ಟಿದ್ದ ತಾಲ್ಲೂಕಿನ ಯರಿಗೋನಾಳ ಗ್ರಾಮದ ನಿವಾಸಿ ಸಿಆರ್‌ಪಿಎಫ್‌ ಯೋಧ ಸುರೇಶ ವಜ್ರದ (33) ಅವರ ಅಂತ್ಯಕ್ರಿಯೆ ಶುಕ್ರವಾರ ಗ್ರಾಮದ ಹೊರವಲಯದಲ್ಲಿ ನಡೆಯಿತು.

ಬದಾಮಿ ತಾಲ್ಲೂಕಿನ ಕರಡಿಗುಡ್ಡ ಸೀಮಾಂತರದಲ್ಲಿ ಗುರುವಾರ ರಾತ್ರಿ ನಡೆದ ಘಟನೆಯಲ್ಲಿ ಮೃತಪಟ್ಟಿದ್ದು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.

ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಸೇರಿದಂತೆ ಇತರೆ ಅಧಿಕಾರಿಗಳು, ಮಾಜಿ ಸೈನಿಕರು ಯೋಧನ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು.

2012ರಲ್ಲಿ ಸೇವೆಗೆ ಸೇರಿದ ಸುರೇಶ್‌ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದರು. ಹೈದರಾಬಾದ್‌ನ ಜಿಡಿ–2 ಬೆಟಲಾಲಿಯನ್‌ದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT