ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು: ವಾರದಲ್ಲಿ ವರದಿಗೆ ಸೂಚನೆ

ಬೇಸಿಗೆ ನಿರ್ವವಹಣೆ ಕುರಿತು ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಸುಂದರೇಶಬಾಬು ಸಭೆ
Last Updated 20 ಮಾರ್ಚ್ 2023, 7:08 IST
ಅಕ್ಷರ ಗಾತ್ರ

ಕೊಪ್ಪಳ: ಬೇಸಿಗೆ ಸಂದರ್ಭದಲ್ಲಿ ಜನ ಹಾಗೂ ಜಾನುವಾರುಗಳಿಗೆ ಸೇರಿದಂತೆ ಯಾರಿಗೂ ನೀರಿನ ಸಮಸ್ಯೆಯಾಗದಂತೆ ಅಗತ್ಯ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಬೇಸಿಗೆ ನಿರ್ವಹಣೆ ಕುರಿತು ಶನಿವಾರ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆಗಿನ ವಿಡಿಯೊ ಸಂವಾದದಲ್ಲಿ ಮಾತನಾಡಿ ಈ ಬಾರಿ ಬಿಸಿಲು ಏರುಗತಿಯಲ್ಲಿದೆ. ಜಿಲ್ಲೆಯಾದ್ಯಂತ ಕುಡಿಯುವ ನೀರಿಗೆ ತೊಂದರೆಯಾಗಬಾರದು. ಗ್ರಾಮ ಪಂಚಾಯಿತಿಗಳು, ನಗರ ಸ್ಥಳೀಯ ಸಂಸ್ಥೆಗಳು ತಮ್ಮಲ್ಲಿರುವ ನೀರಿನ ಮೂಲಗಳ ಸ್ಥಿತಿಗತಿಗಳನ್ನು ಪರಿಶೀಲಿಸಿಕೊಳ್ಳಬೇಕು. ಬೋರವೆಲ್‌ಗಳ ಅಂತರ್ಜಲ ಮಟ್ಟ, ದುರಸ್ತಿ ನಿರ್ವಹಣೆ ಮತ್ತು ಅವಶ್ಯವಿರುವ ಬೋರವೆಲ್‌ಗಳ ಕುರಿತು ಒಂದು ವಾರದಲ್ಲಿ ಮಾಹಿತಿ ಸಲ್ಲಿಸಬೇಕು’ ಎಂದರು.

‘ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಯೋಜನೆಗಳಡಿ ಈಗಾಗಲೇ ನಿರ್ಮಾಣಗೊಂಡ ಎಲ್ಲಾ ಆರ್‌ಒ ಯುನಿಟ್‌ಗಳು ಕಾರ್ಯಗತವಾಗಿರಬೇಕು. ದುರಸ್ತಿಯಿದ್ದರೆ ತುರ್ತು ಕ್ರಮ ಕೈಗೊಳ್ಳಬೇಕು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಆಯಾ ತಾಲ್ಲೂಕಿನ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಪಿಡಿಒಗಳು ಆಯಾ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆ ಜರುಗಿಸಿ ಬೇಸಿಗೆ ಸಮಯದ ನಿರ್ವಹಣೆಯ ಬಗ್ಗೆ ಚರ್ಚೆ ನಡೆಸಬೇಕು’ ಎಂದು ನಿರ್ದೇಶನ ನೀಡಿದರು.

ಕಾರ್ಯಪಡೆ: ಬೇಸಿಗೆ ನಿರ್ವಹಣೆ ಕುರಿತಂತೆ ಎಲ್ಲಾ ತಹಶೀಲ್ದಾರ್‌ಗಳು ಪ್ರತಿ ವಾರಕ್ಕೊಮ್ಮೆ ತಾಲ್ಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಸಿ ನೀರಿನ ಸ್ಥಿತಿಗತಿ ಬಗ್ಗೆ ಎಚ್ಚರಿಕೆ ವಹಿಸಬೇಕು. ಎಲ್ಲಿಯೂ ಲೋಪವಾಗದಂತೆ ಮುಂಜಾಗ್ರತೆ ಕೈಗೊಳ್ಳಬೇಕು ಎಂದರು.

ಜಾನುವಾರುಗಳಿಗೆ ಮೇವಿನ ಅವಶ್ಯಕತೆ ಇದ್ದಲ್ಲಿ ಮೇವು ಬ್ಯಾಂಕ್ ಸ್ಥಾಪನೆಗೆ ಹಾಗೂ ಮೇವು ಪೂರೈಕೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ನರೇಗಾದಡಿ ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ನಿರ್ಮಾಣ ಮಾಡಲಾದ ದನಗಳ ದೊಡ್ಡಿಗಳನ್ನು ಸ್ವಚ್ಛವಾಗಿಡಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಸಹಾಯಕ ಆಯುಕ್ತ ಬಸವಣ್ಣಪ್ಪ ಕಲಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯರಾಣಿ ಪಿ.ಕೆ., ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ, ಪಶು ಇಲಾಖೆ ಉಪನಿರ್ದೇಶಕ ಎಚ್.ನಾಗರಾಜ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

***

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಡಿಬಿಒಟಿ ಹಾಗೂ ಜೆಜೆಎಂ ಆಗದೇ ಇರುವ ಹಳ್ಳಿಗಳಲ್ಲಿ ಬೋರವೆಲ್ ಮೂಲಕ ನೀರು ಪೂರೈಸಲಾಗುವುದು.

ರಾಹುಲ್ ರತ್ನಂ ಪಾಂಡೆ, ಜಿಲ್ಲಾ ಪಂಚಾಯಿತಿ ಸಿಇಒ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT