ಸೋಮವಾರ, ಜುಲೈ 26, 2021
27 °C

ಅಳವಂಡಿ: ರಸ್ತೆ ಮೇಲೆ ನೀರು: ಸಂಚಾರಕ್ಕೆ ತೊಂದರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಳವಂಡಿ (ನೆಲೋಗಿಪುರ): ಸಮೀಪದ ನೆಲೋಗಿಪುರ ಗ್ರಾಮದಿಂದ ತುಂಗಾಭದ್ರಾ ನದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನೀರು ನಿಂತು ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ.

ಗ್ರಾಮದಿಂದ ತುಂಗಾಭದ್ರಾ ನದಿ, ಕೊಪ್ಪಳ, ಕುಕನೂರು ತಾಲ್ಲೂಕಿನ ಹಳ್ಳಿಗಳು ಹಾಗೂ ಬಹು ಗ್ರಾಮ ಕುಡಿಯುವ ನೀರು ಪೂರೈಕೆ ಘಟಕ. ಅಲ್ಲದೆ, ರೈತರ ಜಮೀನುಗಳಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಜನ ಈ ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡಬೇಕಾಗಿದೆ.

ರಸ್ತೆ ಮೇಲೆ ನೀರು ಸಂಗ್ರಹವಾಗಿ ದುರ್ನಾತ ಬೀರುತ್ತಿದೆ. ರೋಗ ಭೀತಿ ಎದುರಾಗಿದೆ. ಈ ಕುರಿತು ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ ಎಂದು ಸ್ಥಳೀಯರು ತಿಳಿಸಿದರು.

ಆದಷ್ಟು ಬೇಗ ನೀರು ತೆರವು ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ನೆಲೋಗಿಪುರ ನಿವಾಸಿ ಹನುಮೇಶ ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು