ಕೊಪ್ಪಳ: ರಾಯಚೂರು, ಕೊಪ್ಪಳ , ಮತ್ತು ಬಳ್ಳಾರಿ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ ಎಡದಂಡೆ, ಬಲದಂಡೆ ಕಾಲುವೆಗಳಿಗೆ ಹಾಗೂ ವಿಜಯನಗರ ಕಾಲುವೆಗಳಿಗೆ ಜಲಾಶಯಕ್ಕೆ ಪೂಜೆ ಸಲ್ಲಿಸುವ ಮೂಲಕ ಕೆಡಿಪಿ ಸದಸ್ಯ ಅಮರೇಶ ಕರಡಿ ಹೇಳಿದರು.
ಭಾನುವಾರ ಮುನಿರಾಬಾದ್ ನ ತುಂಗಭದ್ರಾ ಜಲಾಶಯಕ್ಕೆ ಜನಪ್ರತಿನಿಧಿಗಳು, ರೈತರು, ಗಣ್ಯರೊಂದಿಗೆ ಪೂಜೆ ಸಲ್ಲಿಸಿದ ಅವರು, ತುಂಗಭದ್ರಾ ಜಲಾಶಯ 115ನೇ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಜು. 18 ರಿಂದ ವಿವಿಧ ಕಾಲುವೆಗಳಿಗೆ ನ.30 ರವರೆಗೆ ನೀರು ಜಲಾಶಯದಿಂದ ನೀರು ಹರಿಸುವುದಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಬಂದ ಮೇಲೆ ಜಲಾಶಯದಿಂದ ಎರಡನೇ ವರ್ಷದಲ್ಲಿ ಎರಡು ಬೆಳೆಗಳಿಗೆ ನೀರು ಹರಿಸಲಾಗುತ್ತಿದೆ, ತುಂಗಭದ್ರಾ ಜಲಾಶಯವು ತ್ರಿವಳಿ ಜಿಲ್ಲೆಗಳ ರೈತರ ಜೀವನಾಡಿಯಾಗಿದೆ, ಬಿಜೆಪಿ ಸರ್ಕಾರ ರೈತರ ಪರವಾಗಿರುವುದರಿಂದ ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆಗೆ ನೀರು ಹರಿಸುವ ದೃಢ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ರೈತರ ಹಿತದೃಷ್ಠಿಯಿಂದ ಸರ್ಕಾರ ಕಾಲುವೆಗಳಿಗೆ ನೀರು ಹರಿಸುತ್ತಿದ್ದು, ಜಲಾಶಯದ ವಿವಿಧ ಕಾಲುವೆಗಳಿಂದ ಹರಿವು ನೀರಿನ ಸದುಪಯೋಗವಾಗಬೇಕು, ನಮ್ಮ ಪ್ರದೇಶ ಸಂಪೂರ್ಣವಾಗಿ ನೀರಾವರಿ ಪ್ರದೇಶವಾಗಬೇಕು ಅದಕ್ಕೆ ಅನುಷ್ಠಾನದಲ್ಲಿರುವ ವಿವಿಧ ನೀರಾವರಿ ಯೋಜನೆಗಳಿಗೆ ಸರ್ಕಾರ ಚಾಲನೆಯನ್ನು ನೀಡಿದೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.