ಯಲಬುರ್ಗಾ: ಕಳೆದ ಮೂರು ದಿನಗಳಿಂದ ಪಟ್ಟಣದ 7ನೇ ವಾರ್ಡ್ನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ನೀರಿಗಾಗಿ ಜನರ ಪರದಾಟ ಹೆಚ್ಚುತ್ತಿದೆ. ಪಂಚಾಯಿತಿ ಅಧಿಕಾರಿಗಳು ಕೂಡಲೇ ಇತ್ತ ಕಡೆ ಗಮನ ಹರಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ಸಾಮಾನ್ಯವಾಗಿ ಈ ವಾರ್ಡ್ನಲ್ಲಿ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ. ಆದರೆ ಬೇಸಿಗೆಯಲ್ಲಿ ಈ ಸಮಸ್ಯೆ ಮತ್ತಷ್ಟು ತೀವ್ರಗೊಳ್ಳುತ್ತದೆ. ಪಂಚಾಯಿತಿ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಸದಸ್ಯ ಅಶೋಕ ಅರಕೇರಿ ಆಗ್ರಹಿಸಿದ್ದಾರೆ.

ಪೂರೈಕೆಗೆ ನೀರು ಲಭ್ಯವಾಗದೇ ಇದ್ದರೆ ಟ್ಯಾಂಕರ್ ಮೂಲಕವಾದರೂ ಪೂರೈಸಲು ಕ್ರಮಕೈಗೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಇರುವ ಈ ವಾರ್ಡ್ನಲ್ಲಿ ಜನರು ಈ ನೀರಿಗಾಗಿ ದಿನವಿಡಿ ಕಷ್ಟ ಪಡಬೇಕಾಗಿದೆ. ದುಡಿಯಲು ಹೋಗುವುದಕ್ಕೆ ಆಗುತ್ತಿಲ್ಲ. ಕಾರಣ ಅಧಿಕಾರಿಗಳು ಪರಿಹಾರ ಕಲ್ಪಿಸಿಕೊಡುವ ಮೂಲಕ ಈ ವಾರ್ಡ್ನ ಜನರ ನೀರಿನ ಅಭಾವವನ್ನು ನೀಗಿಸಬೇಕು ಎಂದು ಅಧಿಕಾರಿಗಳಿಗೆ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.