ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಗಿರಿ | ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಲೋಕಾರ್ಪಣೆ ನಾಳೆ: ಶಾಸಕ ದಢೇಸೂಗೂರು

ಕಾರ್ಯಕರ್ತರ ಸಭೆ
Last Updated 24 ಜನವರಿ 2022, 4:24 IST
ಅಕ್ಷರ ಗಾತ್ರ

ಕನಕಗಿರಿ: ‘ಸಮೀಪದ ಕೆ. ಕಾಟಾಪುರದಿಂದ ಶಿರಿವಾರ ಹಾಗೂ ಕರಡೋಣ, ರಾಂಪುರದಿಂದ ರಾಮದುರ್ಗಾ ಗ್ರಾಮದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದು ಜ. 25ರಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಲೋಕೋ ರ್ಪಣೆಗೊಳಿಸಲಿದ್ದಾರೆ’ ಎಂದು ಶಾಸಕ ಬಸವರಾಜ ದಢೇಸೂಗೂರು ತಿಳಿಸಿದರು.

ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನ ಮುಸಲಾಪುರ, ನವಲಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ, ವಸತಿ ಗೃಹಗಳನ್ನು ಸಹ ಉದ್ಘಾಟಿಸಲಾಗುವುದು ಎಂದು ಅವರು ಹೇಳಿದರು.

ನವಲಿಯ ರೈಸ್ ಟೆಕ್ ಪಾರ್ಕ್ ಅಭಿವೃದ್ದಿಗೆ ₹123 ಕೋಟಿ ಅನುದಾನ ಮಂಜೂರು ಮಾಡಿಸಿ ಅಭಿವೃದ್ಧಿಗೊಳಿಸಲಾಗಿದೆ. ಮತ್ತೆ ₹100 ಕೋಟಿ ನೀಡುವಂತೆ ಪ್ರಸ್ತಾವ ಸಲ್ಲಿಸಿದ್ದು ಮುಖ್ಯಮಂತ್ರಿಗಳು ಹಣ ನೀಡುವ ಕುರಿತು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಕನಕಗಿರಿಯಿಂದ ಕಾರಟಗಿ ಪಟ್ಟಣದವರೆಗಿನ ರಸ್ತೆ ಅಭಿವೃದ್ದಿಗೆ ₹62 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ತಾಲ್ಲೂಕಿನ ಶಿರಿವಾರ ಗ್ರಾಮದಲ್ಲಿ ಬೃಹತ್ ಮೊತ್ತದಲ್ಲಿ ಇಸ್ರೇಲ್ ಮಾದರಿಯಲ್ಲಿ ತೋಟಗಾರಿಕೆ ಟೆಕ್ನಾಲಜಿ ಪಾರ್ಕ್ ನಿರ್ಮಿಸಲು ಯೋಜಿಸಿದ್ದು, ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರದಲ್ಲಿ ಕ್ಷೇತ್ರದಲ್ಲಿ ಹತ್ತಾರು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ನವಲಿ ಹತ್ತಿರ ನಿರ್ಮಾಣ ಮಾಡಲು ಯೋಜಿಸಿರುವ ಸಮಾನಾಂತರ ಜಲಾಶಯದಿಂದ ಮುಳುಗಡೆಯಾಗುವ ಗ್ರಾಮಗಳ ಜನರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಸಚಿವ ಹಾಲಪ್ಪ ಆಚಾರ ಅವರು ನಿಯೋಜಿತ ಸಮಾನಾಂತರ ಜಲಾಶಯದ ಸ್ಥಳ ವೀಕ್ಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸುರೇಶ ಗುಗ್ಗಳಶೆಟ್ರ, ಶೇಷಪ್ಪ ಪೂಜಾರ, ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಣ್ಣ ಕನಕಪ್ಪ. ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಹುಲಿಗೆಮ್ಮ ನಾಯಕ, ಕೆಡಿಪಿ ಸದಸ್ಯ ಗುರುಮೂರ್ತಿ, ಪ್ರಮುಖರಾದ ಪಾಂಡುರಂಗ ರಾಠೋಡ್, ರಾಮದುರ್ಗಾ ಸಂಗಪ್ಪ, ಹೊನ್ನುರುಸಾಬ ಕಳ್ಳಿಮನಿ, ಶಿವಾನಂದ ವಂಕಲಕುಂಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT