ಮಂಗಳವಾರ, ನವೆಂಬರ್ 19, 2019
27 °C

ರೇಣುಕಾಚಾರ್ಯ ಬಗ್ಗೆ ಮಾತನಾಡುವ ಯೋಗ್ಯತೆ ನಮಗಿಲ್ಲ: ಲಕ್ಷ್ಮಣ ಸವದಿ ವ್ಯಂಗ್ಯ

Published:
Updated:
prajavani

ಕೊಪ್ಪಳ: ರೇಣುಕಾಚಾರ್ಯ ನಮ್ಮ ಗುರುಗಳು, ಅವರು ದೊಡ್ಡವರು, ಅವರ ಬಗ್ಗೆ ಮಾತನಾಡುವ ಯೋಗ್ಯತೆ ನಮಗೆ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವ್ಯಂಗ್ಯವಾಡಿದರು.

ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಚೆಗೆ ಕುಷ್ಟಗಿ ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ  ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮಾತನಾಡಿ, 25 ಸಾವಿರ ಮತಗಳ ಅಂತರದಿಂದ ಸೋತವರು ಉಪಮುಖ್ಯಮಂತ್ರಿ ಯಾಗಿದ್ದಾರೆ. ಅನರ್ಹರ ಶಾಸಕರಿಂದಲೇ ಅಧಿಕಾರಗಳಿಸಿಕೊಂಡಿದ್ದಾರೆ. ಅವರ ಬಗ್ಗೆ ಗೌರವದಿಂದ ಮಾತನಾಡಬೇಕು ಎಂದು ಹೇಳಿಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ರೇಣುಕಾಚಾರ್ಯ ನಮ್ಮ ಬಗ್ಗೆ ಏನೇ ಹೇಳಿದರು ಅದು ಆಶೀರ್ವಾದ ಎಂದು ಭಾವಿಸುತ್ತೇವೆ ಎಂದು ವಿನೋದವಾಗಿ ಹೇಳಿದರು.

ಪ್ರತಿಕ್ರಿಯಿಸಿ (+)