ಶುಕ್ರವಾರ, ಸೆಪ್ಟೆಂಬರ್ 17, 2021
30 °C
ಯಲಬುರ್ಗಾ: ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಭರವಸೆ

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಬುರ್ಗಾ: ’ಮಾದರಿ ವಿಧಾನ ಸಭಾ ಕ್ಷೇತ್ರವನ್ನಾಗಿ ಮಾಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾ ಗುವುದು‘ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು.

ತಾಲ್ಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಉತ್ತಮ ಇಲಾಖೆಗಳ ಕಾರ್ಯನಿರ್ವಹಣೆಗೆ ಅವಕಾಶ ಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ ಸಮರ್ಥ ರೀತಿಯಲ್ಲಿ ನಿರ್ವಹಿಸಿ ಲಭಿಸಿದ ಅಧಿಕಾರವನ್ನು ಸಾರ್ಥಕಗೊಳಿಸುವುದಾಗಿ ಹೇಳಿದರು.

ಈ ಪ್ರದೇಶದ ಬಹುದಿನಗಳ ಬೇಡಿಕೆಯಾಗಿರುವ ನೀರಾವರಿ ಯೋಜನೆಗಳನ್ನು ಸಾಕಾರಗೊಳಿಸಲು ಸರ್ವಪ್ರಯತ್ನದಲ್ಲಿದ್ದು ಶೀಘ್ರದಲ್ಲಿಯೇ ಜಾರಿಗೊಳ್ಳಲಿದೆ. ಕಾಂಗ್ರೆಸ್ ಸರ್ಕಾರವು ಈ ಯೋಜನೆಗೆ ಅನುದಾನ ನೀಡದೇ ಇರುವುದರಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಆದರೆ ಬಿಜೆಪಿ ಸರ್ಕಾರ ಮತ್ತೆ ಅನುದಾನ ನೀಡಿ ಕಾಮಗಾರಿ ತ್ವರಿತಗತಿಯಲ್ಲಿ ಸಾಗುವಂತೆ ಮಾಡಿದೆ. ಒಟ್ಟಾರೆ ಕ್ಷೇತ್ರದ ಜನತೆಯ ಕಲ್ಯಾಣದ ಜೊತೆಗೆ
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.

ಮುಖಂಡರಾದ ಬಸವಲಿಂಗಪ್ಪ ಭೂತೆ ಮಾತನಾಡಿ, ’ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭದಲ್ಲಿ ಕ್ಷೇತ್ರಕ್ಕೆ ಅಷ್ಟೊಂದು ಅನುದಾನ ಬಿಡುಗಡೆಯಾಗಿರಲಿಲ್ಲ. ಆದರೆ ಈಗ ಕಳೆದ ಅವಧಿಗಿಂತಲೂ ಮೂರುಪಟ್ಟು ಹೆಚ್ಚು ಅನುದಾನ ಕ್ಷೇತ್ರಕ್ಕೆ ತಂದು ಅಭಿವೃದ್ಧಿ ಕಾರ್ಯಕೈಗೊಳ್ಳುತ್ತಿರುವ ಹಾಲಪ್ಪ ಆಚಾರ ಅವರಿಂದ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಕಾಣುತ್ತಿದೆ‘ ಎಂದು ಅಭಿಪ್ರಾಯಪಟ್ಟರು.

ಮುಖಂಡ ಸಿ.ಎಚ್. ಪೋಲೀಸ್‍ಪಾಟೀಲ್ ಹಾಗೂ ವಕ್ತಾರ ವೀರಣ್ಣ ಹುಬ್ಬಳ್ಳಿ ಮಾತನಾಡಿ ಪ್ರತಿಯೊಂದು ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದು ಹೆಮ್ಮೆ ಪಡುವ ಸಂಗತಿ ಎಂದರು.

ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಿವಶಂಕರರಾವ್ ದೇಸಾಯಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ್, ಶಿವಕುಮಾರ ನಾಗಲಾಪೂರಮಠ, ತಾಪಂ ಮಾಜಿ ಸದಸ್ಯ ಸುಧಾಕರ ದೇಸಾಯಿ, ಕಳಕಪ್ಪ ಕಂಬಳಿ, ರಸೂಲಸಾಬ ಹಿರೇಮನಿ, ಗ್ರಾಪಂ ಅಧ್ಯಕ್ಷೆ ಕೆಂಚಮ್ಮ ಹಿರೇಮನಿ, ಉಪಾಧ್ಯಕ್ಷ ಶರಣಪ್ಪ ಕುರಿ, ಸದಸ್ಯ ಶರಣಕುಮಾರ ಅಮರಗಟ್ಟಿ ಇದ್ದರು.

ಇದೇ ದಿನ ಜಿಲ್ಲಾ ಉಸ್ತುವಾರಿ ಸಚಿವರು ಸಂದರ್ಭದಲ್ಲಿ ತಾಲ್ಲೂಕಿನ ಗುತ್ತೂರು ಮತ್ತು ಮಲ್ಕಸಮುದ್ರ ಗ್ರಾಮದಲ್ಲಿ ಅಭಿವೃದ್ಧಿ
ಕಾರ್ಯ ಕೈಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.