ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗತ್ಯವಸ್ತುಗಳ ಬೆಲೆ ಏರಿಕೆಗೆ ಖಂಡನೆ: ವೆಲ್ಫೇರ್ ಪಾರ್ಟಿ ಪ್ರತಿಭಟನೆ

Last Updated 5 ಫೆಬ್ರುವರಿ 2021, 7:19 IST
ಅಕ್ಷರ ಗಾತ್ರ

ಕೊಪ್ಪಳ: ಪೆಟ್ರೋಲ್, ಡೀಸೆಲ್, ಎಲ್‍ಪಿಜಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೊಪ್ಪಳದಲ್ಲಿ ಶುಕ್ರವಾರ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿಲ್ ಪಟೇಲ್, ಕಾರ್ಯದರ್ಶಿ ಮೊಹಮ್ಮದ್ ಅಲಿಮುದ್ದೀನ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಹೊರೆಯಾಗುವಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಬ್ಸಿಡಿ ನೆಪದಲ್ಲಿ ಗೃಹಬಳಕೆ ಸಿಲಿಂಡರ್ ದರದಲ್ಲಿ ₹ 100 ಏರಿಕೆ ಮಾಡಲಾಗಿದೆ. ಇದರಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಕೊರೊನಾದಿಂದಾಗಿ ಆರ್ಥಿಕ ಬಿಕ್ಕಟ್ಟು, ಹಣದುಬ್ಬರ ಹೆಚ್ಚಳದಿಂದ ಹೈರಾಣಾಗಿರುವ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆರೋಪಿಸಿದರು.

ಪ್ರತಿ ಕುಟುಂಬಕ್ಕೆ ವರ್ಷಕ್ಕೆ 12 ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್‌ಗಳಿಗೆ ಸರ್ಕಾರ ನೀಡುತ್ತಿದ್ದ ಸಬ್ಸಿಡಿಯನ್ನು 6 ತಿಂಗಳಿಂದ ನಿಲ್ಲಿಸಲಾಗಿದೆ. ಇತ್ತ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ ಎಂದು ದೂರಿದರು.

ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಭಾರಿ ಏರಿಕೆಯಾಗಿದೆ. ಇದರಿಂದಾಗಿ ವಾಹನ ಸವಾರರಿಗೆ ಮತ್ತು ಲಾರಿ, ಬಸ್, ಟ್ಯಾಕ್ಸಿ ಮಾಲೀಕರಿಗೆ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಸತತವಾಗಿ ಏರಿಕೆಯಾಗುತ್ತಿರುವುದರಿಂದ ರೈತರು ಸೇರಿ ಬಡ, ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿ ಹಣದುಬ್ಬರಕ್ಕೆ ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT