ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಮಾನತೆ ಬರುವ ತನಕ ಮೀಸಲಾತಿ ಇರಬೇಕು ಎಂದು ಅವರು ಹೇಳಿದ್ದನ್ನೇ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಟೀಕಿಸುವ ಬಿಜೆಪಿ ಈಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದು, ಮೀಸಲಾತಿ ಪ್ರಮಾಣ ಹೆಚ್ಚಿಸಲಿ’ ಎಂದು ಸವಾಲು ಹಾಕಿದರು. ಮೋದಿ ಹಾಗೂ ಬಿಜೆಪಿ ಸರ್ಕಾರ ದೇಶದಲ್ಲಿ ಸಮಾನತೆ ತರುವ ಕೆಲಸ ಮಾಡಲಿ ಎಂದರು.