ಕೊಪ್ಪಳ: ‘ರೈತರ ಬದುಕಿನ ಬಗ್ಗೆ ಹಗುರವಾಗಿ ಮಾತನಾಡುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ₹25 ಕೋಟಿ ಕೊಡುತ್ತೇನೆ. ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಯೇ?’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು.
ಇಲ್ಲಿ ಮಾಧ್ಯಮದವರ ಮಾತನಾಡಿ ‘ಹೆಚ್ಚಿನ ಹಣದ ಆಸೆಗೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳುವ ಕೃಷಿ ಸಚಿವ ಶಿವಾನಂದ ಪಾಟೀಲರಿಗೆ ₹5 ಕೋಟಿ ಕೊಡುವೆ. ಅವರೂ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಯೇ’ ಎಂದು ಕೇಳಿದರು.
‘ಯಾವ ರೈತರೂ ಸುಮ್ಮನೆ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಸಂಕಷ್ಟದ ಸಮಯದಲ್ಲಿ ರೈತರಿಗೆ ಧೈರ್ಯ ತುಂಬಬೇಕಾದವರೇ ದುರಹಂಕಾರದಿಂದ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ 135 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ ಎನ್ನುವ ಅಹಂಕಾರ ಇದೆ. ಅಧಿಕಾರ ಶಾಶ್ವತ ಎನ್ನುವ ಭ್ರಮೆಯಲ್ಲಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.