ಪ್ರಜಾವಾಣಿ ವಾರ್ತೆ

ಕಾರಟಗಿ: ಡಾ. ಬಾಬು ಜಗಜೀವನರಾಮ್ ಅವರ 118ನೇ, ಡಾ. ಬಿ. ಆರ್. ಅಂಬೇಡ್ಕರ್ರ 134ನೇ ಜಯಂತಿಯನ್ನು ಏಪ್ರಿಲ್ 14ರಂದು ಅದ್ದೂರಿಯಾಗಿ ನಡೆಸಲು ಸಿದ್ದತೆ ಮಾಡಿಕೊಳ್ಳಬೇಕು. ಅಂದು ನಡೆಯುವ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಎಲ್ಲಾ ಹಂತದ ಅಧಿಕಾರಿಗಳು, ಶಾಲಾ, ಕಾಲೇಜುಗಳ ಮುಖ್ಯಸ್ಥರು, ಶಿಕ್ಷಕರು, ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತೆಯರು, ಎಲ್ಲಾ ಸಂಘಟನೆಗಳ ಪ್ರತಿನಿಧಿಗಳು, ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ತಹಶೀಲ್ದಾರ್ ಎಂ. ಕುಮಾರಸ್ವಾಮಿ ಹೇಳಿದರು.

ಮಹನೀಯರ ಜಯಂತಿ ನಿಮಿತ್ತ ಮಂಗಳವಾರ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾ.ಪಂ ಇಒ ಲಕ್ಷ್ಮಿದೇವಿ, ಇನ್ಸ್ಪೆಕ್ಟರ್ ಸುಧೀರಕುಮಾರ ಬೆಂಕಿ, ಪುರಸಭೆ ಮುಖ್ಯಾಧಿಕಾರಿ ಸುರೇಶ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಯಶಸ್ವಿಗೆ ಅನೇಕರು ಅನೇಕ ಸಲಹೆ, ಸೂಚನೆಗಳನ್ನು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.