ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೌಚಾಲಯ ಗೋಡೆ ಕುಸಿದು ಮಹಿಳೆ ಸಾವು

Published 17 ಮೇ 2024, 21:21 IST
Last Updated 17 ಮೇ 2024, 21:21 IST
ಅಕ್ಷರ ಗಾತ್ರ

ತಾವರಗೇರಾ (ಕೊಪ್ಪಳ ಜಿಲ್ಲೆ): ಪಟ್ಟಣದ ಐದನೇ ವಾರ್ಡ್‌ನಲ್ಲಿ ಮಹಿಳೆಯರ ಸಾರ್ವಜನಿಕ ಶೌಚಾಲಯದ ಗೋಡೆ ಶ್ರುಕ್ರವಾರ ರಾತ್ರಿ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದು ಇಬ್ಬರಿಗೆ ಗಾಯಗಳಾಗಿವೆ.

ಒಂದು ವಾರದಿಂದ ಜಿಲ್ಲೆಯಲ್ಲಿ ಮೇಲಿಂದ ಮೇಲೆ ಮಳೆಯಾಗಿದ್ದರಿಂದ ಗೋಡೆ ಸಾಕಷ್ಟು ನೆಂದಿತ್ತು. ಆದ್ದರಿಂದ ಗೋಡೆ ಕುಸಿದಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ಗೊತ್ತಾಗಿದೆ. ಇನ್ನೊಬ್ಬ ಮಹಿಳೆ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಬಾನು ಬೇಗಂ (34) ಮೃತಪಟ್ಟವರು. ಉಮಾ ಬಾಯಿ ಹಾಗೂ ಮಹಾದೇವಿ ಎಂಬುವರು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯ ಪೊಲೀಸ್‌ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಕುಷ್ಟಗಿ ತಹಶೀಲ್ದಾರ್ ರವಿ ಅಂಗಡಿ ಹಾಗೂ ಪೊಲೀಸರು ಭೇಟಿ ನೀಡಿದರು. ಶೌಚಾಲಯದ ಗೋಡೆ ಅಡಿ ಕಳಗೆ ಸಿಲುಕಿ ಬಿದ್ದವರನ್ನು ಜೆಸಿಬಿ ವಾಹನದ ಮೂಲಕ ಹೊರಗಡೆ ತೆಗೆಯಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT