ಶನಿವಾರ, ಅಕ್ಟೋಬರ್ 24, 2020
25 °C

ಗಂಗಾವತಿಯಲ್ಲಿ ಚಿರತೆ ದಾಳಿ: ಮಹಿಳೆಗೆ ಗಂಭೀರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ಜಾನುವಾರು ಮೇಯಿಸಲು ತೆರಳಿದ್ದ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಜಂಗ್ಲಿ ರಂಗಾಪುರ ಗ್ರಾಮದ ಮಾಬಮ್ಮ (55) ಗಾಯಗೊಂಡವರು. 

ಮಾಬಮ್ಮ ಅವರ ತಲೆ ಹಾಗೂ ಮುಖಕ್ಕೆ ಗಾಯಗಳಾಗಿವೆ.  ಜನರ ಚೀರಾಟದಿಂದ ಚಿರತೆ
ಓಡಿ ಹೋಗಿದೆ.

ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಶಾಸಕ ಪರಣ್ಣ ಮುನವಳ್ಳಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ
ವಿಚಾರಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.