ಬುಧವಾರ, ಮೇ 25, 2022
29 °C

ಕೊಪ್ಪಳ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ತಾಲ್ಲೂಕಿನ ಲಾಚನಕೇರಾ ಗ್ರಾಮದಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫಕೀರಮ್ಮ ನಾಗರಾಜ ಅಡವಿ (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

ಕೊಪ್ಪಳ: ತಾಲ್ಲೂಕಿನ ಲಾಚನಕೇರಾ ಗ್ರಾಮದಲ್ಲಿ ಕುರಿಗಾಹಿಯೊಬ್ಬರು ಕುರಿಗಳಿಗೆ ಮೇವು ತರಲು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಕುಕನೂರು ತಾಲ್ಲೂಕಿನ ದೇವರಾಜ ಸಿದ್ದಪ್ಪ ಈಳಿಗೇರ (20) ಮೃತರು.

ಲಾಚನಕೇರಾ ಗ್ರಾಮದ ತಮ್ಮ ಸಂಬಂಧಿಕರ ಮನೆಯಲ್ಲಿ ವಾಸಮಾಡುತ್ತಿದ್ದರು ಎನ್ನಲಾಗಿದೆ.

ಈ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮದ ಸುತ್ತಮುತ್ತಲಿನ ಹೊಲದ ಬೇಲಿಗಳಲ್ಲಿ ಸಾಕಷ್ಟು ಗಿಡಗಳಿದ್ದು, ಅವುಗಳು ವಿದ್ಯುತ್ ಲೈನ್‌ಗಳಿಗೆ ತಾಗುತ್ತಿವೆ. ಸಂಬಂಧಪಟ್ಟ ಪಂಚಾಯಿತಿ ಅಧಿಕಾರಿ ಹಾಗೂ ಜೆಸ್ಕಾಂ ಸಿಬ್ಬಂದಿಗೆ ತಿಳಿಸಿದರು ಪ್ರಯೋಜನವಾಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು