ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಂಗಭದ್ರಾ ಜಲಾಶಯಕ್ಕೆ ಗೇಟ್ ಇಳಿಸುವ ಕೆಲಸ ಆರಂಭ

Published : 16 ಆಗಸ್ಟ್ 2024, 14:48 IST
Last Updated : 16 ಆಗಸ್ಟ್ 2024, 14:48 IST
ಫಾಲೋ ಮಾಡಿ
Comments

ಕೊಪ್ಪಳ: ತಾಲ್ಲೂಕಿನ ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಗೇಟ್‌ ಕೊಚ್ಚಿ ಹೋಗಿದ್ದ ಜಾಗದಲ್ಲಿ ಮರಳಿ ಗೇಟ್ ಅಳವಡಿಸುವ ಪ್ರಕ್ರಿಯೆ ಆರಂಭವಾಗಿದೆ.

ಆ. 10ರಂದು ರಾತ್ರಿ ಗೇಟ್‌ ಕೊಚ್ಚಿ ಹೋಗಿದ್ದು ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ನದಿ ಸೇರಿದೆ. ಗೇಟ್‌ ಅಳವಡಿಸಲು ಮೊದಲು ಅಡ್ಡಿಯಾಗಿದ್ದ ಸ್ಕೈವಾಕ್‌ ಸಂಜೆ ಕೆಳಗಡೆ ತೆಗೆಯಲಾಗಿದ್ದು, ಈಗ ಗೇಟ್‌ ಇಳಿಸುವ ಪ್ರಕ್ರಿಯೆ ಆರಂಭವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಂಸದ ಕೆ. ರಾಜಶೇಖರ ಹಿಟ್ನಾಳ ಸೇರಿದಂತೆ ಹಲವರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಜಲಾಶಯಗಳ ಗೇಟ್‌ ನಿರ್ವಹಣೆ ಮತ್ತು ಸುರಕ್ಷತಾ ತಜ್ಞ ಕನ್ನಯ್ಯನಾಯ್ಡು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT