ಬುಧವಾರ, ನವೆಂಬರ್ 25, 2020
22 °C
ಬಿಜೆಪಿ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಶಾಸಕ ಪರಣ್ಣ ಮುನವಳ್ಳಿ ಅಭಿಮತ

ಕಾರ್ಯಕರ್ತರೇ ಪಕ್ಷದ ಜೀವಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತ: ‘ಬಿಜೆಪಿ ತತ್ವ ಸಿದ್ಧಾಂತಗಳ ಆಧಾರದ ಮೇಲೆ ನಡೆದುಬಂದ ಪಕ್ಷ. ಕಾರ್ಯಕರ್ತರೇ ಅದರ ಜೀವಾಳ’ ಎಂದು ಶಾಸಕ ಪರಣ್ಣ ಮುನವಳ್ಳಿ ಅಭಿಪ್ರಾಯಪಟ್ಟರು.

ನಗರದ ಅಮರ ಜ್ಯೋತಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ದೇಶದಲ್ಲಿ ನಮ್ಮ ಪಕ್ಷ ಬಲಿಷ್ಠವಾಗಿ ಬೆಳೆದಿದೆ ಎಂದರೆ ಅದಕ್ಕೆ ಕಾರ್ಯಕರ್ತರೇ ಕಾರಣ. ಅವರ ಪರಿಶ್ರಮದಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದರು.

ಪ್ರಶಿಕ್ಷಣ ವರ್ಗದ ಜಿಲ್ಲಾ ಸಂಚಾಲಕ ಪ್ರಭು ಕಪಗಲ್ ಮಾತನಾಡಿ,‘ದೇಶದಲ್ಲಿ ಬಿಜೆಪಿ ಪಕ್ಷವು ತನ್ನ ಸಿದ್ಧಾಂತ ಹಾಗೂ ಕಾರ್ಯದ ಮೂಲಕ ವಿಭಿನ್ನ ಪಕ್ಷ ಎಂದು ಗುರುತಿಸಿಕೊಂಡಿದೆ. ಇಡೀ ದೇಶದಾದ್ಯಂತ ತನ್ನ ಕಾರ್ಯಕರ್ತರನ್ನು ಬೆಳೆಸುವ ಕೆಲಸ ಮಾಡುತ್ತಿದೆ. ಇಂದು ಪ್ರಶಿಕ್ಷಣ ವರ್ಗದಲ್ಲಿ 10 ವಿಷಯಗಳ ಕುರಿತು ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು. ಕಾರ್ಯಕರ್ತರು ಯಾವ ರೀತಿ ಕೆಲಸ ಮಾಡಬೇಕು. ಪಕ್ಷದ ಸಿದ್ಧಾಂತ ಏನು ಎಂಬುದರ ಕುರಿತು ತಿಳಿಸಲಾಗುವುದು’ ಎಂದರು.

ಬಿಜೆಪಿಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ್‌, ಪ್ರಮುಖರಾದ ತಿಪ್ಪೇರುದ್ರಸ್ವಾಮಿ, ಚನ್ನಪ್ಪ ಮಳಿಗಿ, ಕಾಶಿನಾಥ ಚಿತ್ರಗಾರ, ಯಮನೂರ ಚೌಡ್ಕಿ, ಮಹಾಲಿಂಗಪ್ಪ, ನಾಗರಾಜ ಚಳಗೇರಿ, ವಿರೇಶ್‌ ಬಲಕುಂದಿ, ಮಹಾದೇವಪ್ಪ ಹಾಗೂ ವೆಂಕಟೇಶ ಅಮರಜ್ಯೋತಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.