ಕೊಪ್ಪಳ: ಸೂರ್ಯನ ಬಾಹ್ಯ ವಾತಾವರಣದ ಅಧ್ಯಯನಕ್ಕೆ ಇಸ್ರೊ ಉಡ್ಡಯನ ಮಾಡಿರುವ ಆದಿತ್ಯ ಎಲ್ -1 ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಆಗಲಿ ಎಂದು ಪ್ರಾರ್ಥಿಸಿ ಇಲ್ಲಿನ ರಾಯರ ಮಠದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ರಾಯರ ಆರಾಧನಾ ಮಹೋತ್ಸವದ ಕೊನೆಯ ದಿನದ ಉತ್ತರರಾಧನೆಯ ರಥೋತ್ಸವಕ್ಕೂ ಮೊದಲು ಪೂಜೆ ಸಲ್ಲಿಸಲಾಯಿತು.
ಆದಿತ್ಯ ಉಡ್ಡಯನದ ಚಿತ್ರವನ್ನು ರಥದ ಮುಂಭಾಗದಲ್ಲಿ ಇರಿಸಿ ಹೋಮ ಸೇರಿದಂತೆ ವಿವಿಧ ಪೂಜೆಗಳನ್ನು ಸಲ್ಲಿಸಲಾಯಿತು. ಭಕ್ತರು ಆ ಚಿತ್ರವನ್ನು ಕೈಯಲ್ಲಿ ಹಿಡಿದುಕೊಂಡು ಫೋಟೊ ತೆಗೆಯಿಸಿಕೊಂಡ ಚಿತ್ರಣವೂ ಕಂಡು ಬಂತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.