ಯಲಬುರ್ಗಾ: ತಾಲ್ಲೂಕಿನ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ನಿರ್ಮಿಸಿರುವ ಬುದ್ಧ ಬಸವ ಅಂಬೇಡ್ಕರ್ ಸಮುದಾಯ ಭವನ ಏ.20ರಂದು ಬೆಳಿಗ್ಗೆ 11ಕ್ಕೆ ಉದ್ಘಾಟನೆಗೊಳ್ಳಲಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ₹ 8 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಈ ಭವನವು ಈ ಭಾಗದ ವಿವಿಧ ಸಮಾಜದ ಧಾರ್ಮಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಹೆಚ್ಚಿನ ಅನುಕೂಲವಾಗಲಿದೆ.

ಜಿಲ್ಲೆಯಲ್ಲಿ ಹಲವು ದೊಡ್ಡ ಸುಕ್ಷೇತ್ರಗಲ್ಲಿ ಒಂದಾದ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ಈ ಸಮುದಾಯ ಭವನ ನಿರ್ಮಾಣಗೊಂಡಿದ್ದು ಹಲವು ರೀತಿಯಲ್ಲಿ ಪ್ರಯೋಜನಕ್ಕೆ ಕಾರಣವಾಗಲಿದೆ. ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರಡ್ಡಿ ಉದ್ಘಾಟಿಸಲಿದ್ದು, ಅನೇಕ ರಾಜಕೀಯ ಧುರೀಣರು, ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಪ್ರಯುಕ್ತ ಗ್ರಾಮದಲ್ಲಿ ಕುಂಭೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಜರುಗಲಿವೆ ಎಂದು ಉಪ ತಹಶೀಲ್ದಾರ್ ವಿಜಯಕುಮಾರ ಗುಂಡೂರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-35-1689367892

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.