ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಬುರ್ಗಾ ಪಟ್ಟಣದ ಅಭಿವೃದ್ಧಿಗೆ ಬದ್ಧ: ಸಚಿವ ಹಾಲಪ್ಪ

ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
Last Updated 19 ಮಾರ್ಚ್ 2023, 7:39 IST
ಅಕ್ಷರ ಗಾತ್ರ

ಯಲಬುರ್ಗಾ: ‘ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ಪಟ್ಟಣದಲ್ಲಿ ತರಕಾರಿ ಮಾರುಕಟ್ಟೆ ಹಾಗೂ ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.

ಪಟ್ಟಣದಲ್ಲಿ ನೂರಾರು ಕೋಟಿ ವೆಚ್ಚದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಿವಿಧ ವಾರ್ಡ್‌ಗಳಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ನಂತರ ಸುಂದರ ನಗರವಾಗಿ ರೂಪುಗೊಳ್ಳಲಿದೆ ಎಂದು ಹೇಳಿದರು.

ಬಹುದಿನಗಳ ಬೇಡಿಕೆಯಾಗಿದ್ದ ಎರಡು ಕಾಮಗಾರಿಗಳನ್ನು ಗುತ್ತಿಗೆ ಪಡೆದವರು ತ್ವರಿತವಾಗಿ ಮುಗಿಸಿ ಜನರ ಬಳಕೆಗೆ ಅನುಕೂಲ ಮಾಡಿಕೊಡಬೇಕು. ಬೇರೆ ಕಟ್ಟಡ ದಲ್ಲಿದ್ದ ಪಂಚಾಯಿತಿ ಕಟ್ಟಡವು ಪಟ್ಟಣದ ಹೃದಯಭಾಗದಲ್ಲಿಯೇ ನಿರ್ಮಾಣಗೊಳ್ಳಲಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಮಾತನಾಡಿದರು.

ಉಪಾಧ್ಯಕ್ಷೆ ಶಾಂತಾ ಮಾಟೂರ, ಸ್ಥಾಯಿ ಸಮಿತಿ ಅಧ್ಯಕ್ಷ ಕಳಕಪ್ಪ ತಳವಾರ, ಮುಖ್ಯಾಧಿಕಾರಿ ಶಿವಕುಮಾರ ಕಟ್ಟಿಮನಿ, ಮುಖಂಡ ಬಸವಲಿಂಗಪ್ಪ ಭೂತೆ, ಸಿ.ಎಚ್.ಪೊಲೀಸ್‍ ಪಾಟೀಲ, ಸಿದ್ಧರಾಮೇಶ ಬೇಲೇರಿ, ಕಳಕಪ್ಪ ಕಂಬಳಿ, ರೇವಣಪ್ಪ ಹಿರೇಕುರುಬರ, ವಸಂತ ಭಾವಿಮನಿ, ಅಶೋಕ ಅರಕೇರಿ, ಬಸವಲಿಂಗಪ್ಪ ಕೊತ್ತಲ, ಅಂದಯ್ಯ ಕಳ್ಳಿಮಠ, ಹನಮಂತ ಭಜಂತ್ರಿ, ರಿಯಾಜ ಖಾಜಿ ಹಾಗೂ ಡಾ.ನಂದಿತಾ ದಾನರಡ್ಡಿ, ಕಲಾವತಿ ಮರದಡ್ಡಿ, ವಿಜಯಲಕ್ಷ್ಮಿ ಬೇಲೇರಿ, ಶ್ರೀದೇವಿ ಗುರುವಿನ ಹಾಗೂ ಬಸಮ್ಮ ಬಣಕಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT