ಯಲಬುರ್ಗಾ: ತಾಲ್ಲೂಕಿನ ತಾಳಕೇರಿ ಗ್ರಾ.ಪಂ ವ್ಯಾಪ್ತಿಯ ಕಲ್ಲಭಾವಿ ಗ್ರಾಮದಲ್ಲಿ ಪ್ರಸಕ್ತ ಸಾಲಿನ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ತಾ.ಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ಪಾಟೀಲ ಕಾಮಗಾರಿಯನ್ನು ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ‘ಮನರೇಗಾ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕರಿಗೆ 2 ತಿಂಗಳು ನಿರಂತರ ಕೆಲಸ ಕಲ್ಪಿಸಿಕೊಡಲಾಗುತ್ತಿದೆ. ಎರಡು ತಿಂಗಳಲ್ಲಿ ಶೇ 80ರಷ್ಟು ಮಾನವ ದಿನಗಳ ಸದುಪಯೋಗ ಪಡಿಸಿಕೊಳ್ಳಬೇಕು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದಾಗಿದೆ. ಮುಖ್ಯವಾಗಿ ಅಳತೆಗೆ ತಕ್ಕಂತೆ ವೇತನ ದೊರೆಯುತ್ತದೆ. ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸಮಾನ ವೇತನ ದೊರೆಯುಲಿದೆ. ಯೋಜನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮಹಿಳೆಯರು ಆರ್ಥಿಕ ಸಬಲರಾಗಲು ಹೆಚ್ಚಿನ ಅವಕಾಶಗಳಿವೆ’ ಎಂದು ಹೇಳಿದರು.

ತಾ.ಪಂ. ತಾಂತ್ರಿಕ ಸಂಯೋಜಕ ಸಂತೋಷ ನಂದಾಪುರ, ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಮಾತನಾಡಿದರು. ಡಿಇಒ, ಟಿಎಇ, ಬಿಎಫ್ಟಿ, ಗ್ರಾಪಂ ಸಿಬ್ಬಂದಿ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-35-1266695705

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.