ಯಲಬುರ್ಗಾ: ತಾಲ್ಲೂಕಿನ ಬಂಡಿ ಗ್ರಾ.ಪಂ ವ್ಯಾಪ್ತಿಯ ಹಗೆದಾಳ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಾಲಾ ಅಭಿವೃದ್ಧಿ ಕಾಮಗಾರಿ ಹಾಗೂ ರೋಜಗಾರ ದಿನ ಆಚರಿಸಲಾಯಿತು.

ತಾ.ಪಂ ಇಒ ನೀಲಗಂಗಮ್ಮ ಬಬಲಾದ ಮಾತನಾಡಿ, ‘ಗ್ರಾಮೀಣ ಕೃಷಿ ಕಾರ್ಮಿಕರು ಹಾಗೂ ಮಹಿಳಾ ಕೂಲಿಕಾರರಿಗೆ ಖಾತ್ರಿ ಯೋಜನೆ ವರದಾನವಾಗಿದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಮಾತನಾಡಿ, ‘ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ಧನ್ ಯೋಜನೆಯು ಅಸಂಘಟಿತ ವಲಯ ಕಾರ್ಮಿಕರಿಗಾಗಿ ಪರಿಚಿಸಿದ ಒಳ್ಳೆಯ ಯೋಜನೆಯಾಗಿದೆ. ಸ್ವಯಂಪ್ರೇರಿತ ಮತ್ತು ಕೊಡುಗೆ ಆಧಾರಿತ ಪಿಂಚಣಿ ಯೋಜನೆಯಾಗಿರುವ ಅದರ ಅಡಿಯಲ್ಲಿ 60 ವರ್ಷ ವಯಸ್ಸಿನ ನಂತರ ಪ್ರತಿ ತಿಂಗಳು ಮಾಸಿಕ ಪಿಂಚಣಿ ದೊರೆಯುವುದಾಗಿದೆ. ಇದು ಬೀದಿ ಬದಿ ವ್ಯಾಪಾರಿಗಳೂ, ಕಟ್ಟಡ ಕಾರ್ಮಿಕರು ಹಾಗೂ ಕೃಷಿ ಕೂಲಿ ಕಾರ್ಮಿಕರು, ಮನೆಯ ಕೆಲಸದವರು ಕೂಡ ಅದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ’ ಎಂದು ಹೇಳಿದರು.

ಪಂಚಾಯಿತಿ ಸಿಬ್ಬಂದಿ ಹಾಗೂ ಸಮುದಾಯ ತಾಂತ್ರಿಕ ಸಹಾಯಕ ಶರೀಫ್ ಸುಂಕದ, ಕಾಯಕಮಿತ್ರರಾದ ಶರಣಮ್ಮ ಸೇರಿ ಸುಮಾರು 175ಕ್ಕೂ ಅಧಿಕ ಸಂಖ್ಯೆಯ ಅಕುಶಲ ಕಾರ್ಮಿಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-35-1870253289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.