ಯಲಬುರ್ಗಾ: ತಾಲ್ಲೂಕಿನ ಸಂಗನಾಳ-ಹಾಳಕೇರಿ ರಸ್ತೆ ಮಧ್ಯೆ ಹಾದು ಹೋಗಿರುವ 400 ಕೆ.ವಿ ವಿದ್ಯುತ್ ಕಂಬ ಹಾಗೂ ಉನ್ನತ ಮಟ್ಟದ ತಂತಿ ಲೈನ್ ಶನಿವಾರ ಮಧ್ಯರಾತ್ರಿ ಜೋರಾದ ಗಾಳಿಗೆ ನೆಲಕ್ಕುರುಳಿದ ಘಟನೆ ಗ್ರಾಮೀಣ ಭಾಗದ ಜನರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.

ರಸ್ತೆ ಮಧ್ಯೆ ಬೃಹತ್ ಗಾತ್ರದ ಕಂಬ ಉರುಳಿ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿತ್ತು. ಘಟನೆ ಮಧ್ಯರಾತ್ರಿ ಸಂಭವಿಸಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸಂಗನಾಳ, ಹಾಳಕೇರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ಸ್ಥಳಕ್ಕೆ ಧಾವಿಸಿ ಆಕ್ರೋಶ ವ್ಯಕ್ತಪಡಿಸಿದರು. ‘ಇದು ಸಹಜ ಘಟನೆ ಅಲ್ಲ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕಳಪೆ ಕಾಮಗಾರಿಯ ಪರಿಣಾಮ‘ ಎಂದು ರೈತರು ಕಿಡಿಕಾರಿದರು.

ಈ ರಸ್ತೆ ಮಾರ್ಗವನ್ನು ಪ್ರತಿದಿನ ನೂರಾರು ರೈತರು ಜಮೀನುಗಳಿಗೆ ತೆರಳಲು ಬಳಸುತ್ತಾರೆ. ಟ್ರ್ಯಾಕ್ಟರ್, ಎತ್ತುಬಂಡಿ, ಬೆಳೆ ಸಾಗಣೆ ವಾಹನಗಳು ಹಾಗೂ ಕೃಷಿ ಯಂತ್ರೋಪಕರಣಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತವೆ. ಹಗಲು ವೇಳೆ ಈ ಕಂಬ ಉರುಳಿ ಬಿದ್ದಿದ್ದರೆ ರೈತರು, ಕೂಲಿ ಕಾರ್ಮಿಕರು ಅಥವಾ ಶಾಲಾ ಮಕ್ಕಳು ಬಲಿಯಾಗುತ್ತಿದ್ದರು. ಆಗ ಅದರ ಹೊಣೆ ಯಾರು ಹೊರುತ್ತಿದ್ದರು? ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ರೈತರ ಪ್ರಕಾರ, ಉನ್ನತ ವಿದ್ಯುತ್ ಲೈನ್ಗಳ ಅಡಿಯಲ್ಲಿ ಕೃಷಿ ಮಾಡುವುದೇ ಭಯ ಶುರುವಾಗಿದೆ. ಪ್ರತಿದಿನ ಜೀವ ಕೈಯಲ್ಲಿ ಹಿಡಿದು ಹೊಲಗಳಿಗೆ ಹೋಗುವ ಸ್ಥಿತಿ ಬಂದಿದೆ. ಕಂಬಗಳು ಯಾವಾಗ ಬೀಳುತ್ತವೋ, ತಂತಿಗಳು ಯಾವಾಗ ಕಿತ್ತು ಬೀಳುತ್ತವೋ ಎಂಬ ಭಯದಲ್ಲಿ ರೈತರು ಬದುಕುತ್ತಿದ್ದಾರೆ ಎಂದು ರೈತರು ಬೇಸರ ವ್ಯಕ್ತಪಡಿಸಿದರು.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬ್ಯಾರಿಕೇಡ್ ಅಳವಡಿಸಿ ಸಂಚಾರ ನಿಯಂತ್ರಿಸಿದರು. ನಂತರ ಜೆಸ್ಕಾಂ ಸಿಬ್ಬಂದಿ ಹಾಗೂ ತಾಂತ್ರಿಕ ತಂಡ ದುರಸ್ತಿ ಕಾರ್ಯ ಆರಂಭಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-35-801326560

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.