ಕೊಪ್ಪಳ: ದಶಕದ ಹಿಂದೆ ಸಚಿವ ಶಿವರಾಜ ತಂಗಡಗಿ ರಾಜೀನಾಮೆಗೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಸಾವಿನ ಪ್ರಕರಣದ ಅಂತಿಮ ಆದೇಶ ಇಲ್ಲಿನ ಜಿಲ್ಲಾ ಕೋರ್ಟ್ ಶುಕ್ರವಾರ ಪ್ರಕಟಿಸಿದ್ದು, ಎಲ್ಲ ಒಂಬತ್ತು ಆರೋಪಿಗಳನ್ನು ಖುಲಾಸೆ ಮಾಡಲಾಗಿದೆ.

ಕನಕಗಿರಿ ತಾಲ್ಲೂಕಿನ ಕನಕಾಪುರ ಗ್ರಾಮದ ಯಲ್ಲಾಲಿಂಗ ಗ್ರಾಮದಲ್ಲಿ ನಡೆದಿದ್ದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದರು. ಇದಾದ ಬಳಿಕ 2015ರ ಜನವರಿ 11ರಂದು ಆತನ ಮೃತದೇಹ ಕೊಪ್ಪಳ ರೈಲ್ವೆ ಹಳಿಯ ಬಳಿ ಪತ್ತೆಯಾಗಿತ್ತು. ಕೆಲವೇ ದಿನಗಳಲ್ಲಿ ಇದು ಕೊಲೆ ಎಂದು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.

ಪ್ರಕರಣದಲ್ಲಿ ಸಚಿವ ತಂಗಡಗಿ ಆಪ್ತ ಹನುಮೇಶ ನಾಯಕ ಸೇರಿ ಒಂಬತ್ತು ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದರಿಂದ ದಶಕದ ಹಿಂದೆ ಇದು ರಾಜ್ಯದ ರಾಜಕಾರಣದಲ್ಲಿ ದೊಡ್ಡ ಸುದ್ದಿಯಾಗಿತ್ತು. ರಾಜಕೀಯ ಒತ್ತಡದ ಬಳಿಕ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.

‘ರಾಜಕೀಯ ಷಡ್ಯಂತ್ರದ ಕಾರಣಕ್ಕೆ ಒಂಬತ್ತು ಜನರ ಮೇಲೆ ಕೊಲೆ ಆರೋಪ ಹೊರಿಸಲಾಗಿತ್ತು. ಇದು ನಿರಾಧಾರ ಎಂದು ನ್ಯಾಯಾಲಯ ಹೇಳಿದೆ’ ಎಂದು ವಕೀಲ ಗಂಗಾಧರ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.