ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಸಲು ಆಗ್ರಹಿಸಲು ಯಾತ್ರೆ

Last Updated 8 ನವೆಂಬರ್ 2022, 16:24 IST
ಅಕ್ಷರ ಗಾತ್ರ

ಕೊಪ್ಪಳ: 2006ರ ಏಪ್ರಿಲ್‌ನಿಂದ ರಾಜ್ಯ ಸರ್ಕಾರಿ ನೌಕರರಿಗೆ ಅನ್ವಯವಾಗಿರುವ ಎನ್‌ಪಿಎಸ್‌ ರದ್ದುಗೊಳಿಸಬೇಕು ಎಂದು ಕರ್ನಾಟಕ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘ ಡಿ. 19ರಂದು ಬೆಂಗಳೂರಿನಲ್ಲಿ ಹೋರಾಟ ಆಯೋಜಿಸಿದೆ. ಇದಕ್ಕೆ ಪೂರ್ವಭಾವಿಯಾಗಿ ಜಾಗೃತಿ ಮೂಡಿಸಲು ನಗರದಲ್ಲಿ ಸೋಮವಾರ ಒಪಿಎಸ್‌ ಸಂಕಲ್ಪ ಯಾತ್ರೆ ಜರುಗಿತು.

ಗವಿಮಠದಿಂದ ಗಡಿಯಾರ ಕಂಬ, ಜವಾಹರ್ ರಸ್ತೆ, ಅಶೋಕ ವೃತ್ತದಿಂದ ತಾಲ್ಲೂಕು ಕ್ರೀಡಾಂಗಣದವರೆಗೆ ನೌಕರರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಶಾಂತರಾಮ್ ತೇಜ ಮಾತನಾಡಿ ‘ಸಂಘಟನೆಯು 27 ದಿನಗಳಿಂದ ರಾಜ್ಯದಾದ್ಯಂತ ಸಂಚರಿಸಿ ಎನ್‌ಪಿಎಸ್ ಯೋಜನೆಯ ಕರಾಳತೆಯನ್ನು ಎಲ್ಲ ಸರ್ಕಾರಿ ನೌಕರರಿಗೆ ತಿಳಿಸುತ್ತಾ ಬಂದಿದೆ. ಪಿಂಚಣಿ ಎನ್ನುವುದು ಸರ್ಕಾರಿ ನೌಕರರ ಮೂಲಭೂತ ಹಕ್ಕು. ಸಂಧ್ಯಾಕಾಲದಲ್ಲಿ ನಿವೃತ್ತ ನೌಕರರ ಸ್ವಾಭಿಮಾನದ ಮತ್ತು ಗೌರವದ ಪ್ರತೀಕವಾಗಿದೆ. ಆದ್ದರಿಂದ ಹಳೆಯ ನಿಶ್ಚಿತ ಪಿಂಚಣಿ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಪ್ರಧಾನ ಕಾರ್ಯದರ್ಶಿ ಶ್ರೀನಾಗನಗೌಡ ಎಂ.ಎ, ಹಿರಿಯ ಉಪಾಧ್ಯಕ್ಷ ಸಿದ್ದಪ್ಪ ಸಂಗಣ್ಣವರ್, ಸಂಘದ ಜಿಲ್ಲಾ ಸಂಚಾಲಕ ಬಸವರಾಜ ಕಮಲಾಪುರ ಸೇರಿದಂತೆ ಹಲವಾರು ಜನ ನೌಕರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT