ಯಲಬುರ್ಗಾ: ತಾಲ್ಲೂಕಿನ ಹಿರೇವಂಕಲಕುಂಟಾ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಕುಶಲ ಕೂಲಿಕಾರರಿಗೆ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ವಿಶ್ವ ಕಾರ್ಮಿಕರ ದಿನ ಆಚರಿಸಲಾಯಿತು.

ನೇತೃತ್ವ ವಹಿಸಿದ್ದ ತಾಲ್ಲೂಕು ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಮಾತನಾಡಿ, ‘ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಕೊಡುಗೆ ಅಪಾರವಾಗಿದ್ದು, ಅವರ ಪರಿಶ್ರಮಿದಿಂದಲೇ ದೇಶದ ಉತ್ಪಾದಕತೆ ವಲಯ ಹೆಚ್ಚು ಕ್ರಿಯಾಶೀಲತೆಯಿಂದ ಕೂಡಿದೆ. ಆದರೆ ಪರಿಶ್ರಮಕ್ಕೆ ತಕ್ಕಂತೆ ಅಗತ್ಯ ಸೌಲಭ್ಯ ಮತ್ತು ವೇತನ ದೊರೆಯಬೇಕಾಗಿದೆ. ಕಾರ್ಮಿಕರ ಹಿತ ಕಾಪಾಡುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಸುಸ್ಥಿರ ಕಾಪಾಡಿಕೊಳ್ಳಬೇಕಾಗಿದೆ’ ಎಂದರು.

ನರೇಗಾ ಯೋಜನೆ ಅಡಿಯಲ್ಲಿ ಕೂಲಿಕಾರರು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಸುಧಾರಣೆಗೆ ಕಾರಣವಾಗುತ್ತಿದೆ. ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಕಾರ್ಮಿಕರ ದಿನಾಚರಣೆಯು ಕಾರ್ಮಿಕರಿಗೆ ಒಳ್ಳೆಯದಾದರೆ ಮಾತ್ರ ಸಾರ್ಥಕವಾಗುತ್ತದೆ ಎಂದರು.

ಈ ವೇಳೆ ಕಾರ್ಮಿಕ ದಿನಾಚರಣೆ ಪ್ರಯುಕ್ತ ಕೂಲಿಕಾರರಿಂದ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ನಂತರ ಸಿಹಿ ಹಂಚಲಾಯಿತು. ಗ್ರಾಮ ಕಾಯಕ ಮಿತ್ರರಾದ ಮಂಜುಳಾ ವಾಲ್ಮಿಕಿ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-35-1224296424

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.