ಯಲಬುರ್ಗಾ: ಬಸವ ಜಯಂತಿ ಪ್ರಯುಕ್ತ ಪಟ್ಟಣದ ಮೊಗ್ಗಿ ಬಸವೇಶ್ವರ ಜಾತ್ರಾ ಮಹೋತ್ಸವಕ್ಕೆ ಅದ್ದೂರಿಯಾಗಿ ಚಾಲನೆ ದೊರೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ವಿಜೃಂಭಣೆಯಿಂದ ಜರುಗಿದವು.

ಮಧ್ಯಾಹ್ನ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ವಿವಿಧ ಮಠಾಧೀಶರು ಹಾಗೂ ಸ್ಥಳೀಯ ಗಣ್ಯರು ನೇತೃತ್ವದಲ್ಲಿ ನೆರವೇರಿದವು.

ಸಾನ್ನಿಧ್ಯ ವಹಿಸಿದ್ದ ಶ್ರೀಧರ ಮುರಡಿ ಹಿರೇಮಠದ ಪೀಠಾಧಿಕಾರಿ ಬಸವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ‘ಈ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ದೊಡ್ಡ ಗೌರವವಿದೆ. ಸುಮಾರು ವರ್ಷಗಳಿಂದಲೂ ನಡೆದುಕೊಂಡು ಬರುತ್ತಿದೆ’ ಎಂದರು.

ಸಮಿತಿಯ ಗೌರವಾಧ್ಯಕ್ಷ ಶೇಖರಗೌಡ ಉಳ್ಳಾಗಡ್ಡಿ ಮಾತನಾಡಿ, ‘ವಿವಿಧ ರೀತಿಯಲ್ಲಿ ದಾನಿಗಳ ಸಹಕಾರದಿಂದ ಹಮ್ಮಿಕೊಂಡಿರುವ ಸಾಮೂಹಿಕ ವಿವಾಹ ದಲ್ಲಿ ಈ ವರ್ಷ 20 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ’ ಎಂದು ಆಶಿಸಿದರು.

ಸಮಿತಿಯ ಪದಾಧಿಕಾರಿಗಳಾದ ವೀರನಗೌಡ ಬನಪ್ಪಗೌಡ್ರ, ಸುರೇಶಗೌಡ ಶಿವನಗೌಡ್ರ, ದೊಡ್ಡಯ್ಯ ಗುರುವಿನ, ಕರಸಿದ್ದಪ್ಪ ಮುಳಗುಂದ, ಕಲ್ಲನಗೌಡ ಓಜನಹಳ್ಳಿ, ಬಸವರಾಜ ಅಧಿಕಾರಿ, ಷಣ್ಮುಖಪ್ಪ ರಾಂಪೂರ, ಮಂಜುನಾಥ ಅಧಿಕಾರಿ, ಮೈಲಾರಗೌಡ ತಳವಗೇರಿ, ಸಂಗಣ್ಣ ತೆಂಗಿನಕಾಯಿ ಸೇರಿ ಅನೇಕರು ಹಾಜರಿದ್ದರು.

ರಥೋತ್ಸವ: ಸಂಜೆಯಾಗುತ್ತಿದ್ದಂತೆ ಸಹಸ್ರಾರು ಸಂಖ್ಯೆಯ ಭಕ್ತ ಸಮೂಹ ದೊದಿಗೆ ಪಂಚ ಕಳಸ ರಥೋತ್ಸವ ಅದ್ದೂರಿಯಾಗಿ ಜರುಗಿತು. ನೂತನ ರಥದ ಎರಡನೇ ವರ್ಷದ ಪಂಚ ಕಳಕದ ಉತ್ಸವವನ್ನು ನೋಡುವುದಕ್ಕಾಗಿಯೇ ಸಾಕಷ್ಟು ಸಂಖ್ಯೆಯಲ್ಲಿ ನವ ದಂಪತಿಗಳು ಹಾಜರಿದ್ದರು. ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-35-764571014

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.