ಯಲಬುರ್ಗಾ: ಶ್ರೀಧರ ಮುರಡಿ ಹಿರೇಮಠದ ಹತ್ತಿರ ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಬಸವರಾಜ ಮಾನಿಂಗಪ್ಪಗೌಡ ಪಾಟೀಲ ಬಂಧಿತ. ಅವರು ಇಲ್ಲಿನ ಮೀನಾಕ್ಷಿ ನಗರದಲ್ಲಿ ವಾಸವಾಗಿದ್ದರು.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ ಅವರು ಪೊಲೀಸ್ ಅಧಿಕಾರಿಗಳ ತಂಡ ರಚಿಸಿದ್ದರು. ಆ ತಂಡ ಆರೋಪಿಯನ್ನು ಬಂಧಿಸಿ ಪಿಸ್ತೂಲು ಹಾಗೂ ಗುಂಡುಗಳನ್ನು ವಶಕ್ಕೆ ಪಡೆದಿದೆ.

ತನಿಖೆ ವೇಳೆ ತಪ್ಪೊಪ್ಪಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್.ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.