ಯಲಬುರ್ಗಾ: ಪಟ್ಟಣದಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಯಾವುದೇ ಸಣ್ಣಪುಟ್ಟ ತೊಂದರೆ ಕಂಡು ಬಂದಲ್ಲಿ ಪ.ಪಂ ವತಿಯಿಂದ ಆರಂಭಿಸಲಾದ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ ತಕ್ಷಣ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಸಾರ್ವಜನಿಕರಿಗೆ ಕೋರಿದ್ದಾರೆ.

ಪಟ್ಟಣದ 15 ವಾರ್ಡ್ಗಳಲ್ಲಿ ಒಟ್ಟು 32 ಬೋರ್ವೆಲ್ಗಳು ಕಾರ್ಯನಿರ್ವಹಣೆಗೆ ಒಳಪಟ್ಟಿವೆ. ಪ್ರತಿಯೊಂದು ವಾರ್ಡ್ಗೆ ಸಮರ್ಪಕವಾಗಿ ನೀರು ಪೂರೈಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ಗುಣಮಟ್ಟ ಕಾಪಾಡುವ ಸಲುವಾಗಿ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಲಾಗುತ್ತಿದ್ದು, ನೀರು ಸಂಗ್ರಹಿಸುವ ತೊಟ್ಟಿಗಳ ಶುದ್ಧೀಕರಣ ಕಾರ್ಯವೂ ನಿರಂತರವಾಗಿ ನಡೆಯುತ್ತಿದೆ. ಪೈಪ್ಲೈನ್ಗಳಲ್ಲಿ ಉಂಟಾಗುವ ತಾಂತ್ರಿಕ ದೋಷಗಳನ್ನು ತಕ್ಷಣವೇ ಸರಿಪಡಿಸಲು ತಜ್ಞ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ವಾರ್ಡ್ನಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಚಿತವಾಗಿ ಯೋಜನೆ ರೂಪಿಸಿ ಅಗತ್ಯ ಕ್ರಮ ಕೈಗೊಂಡಿದ್ದರೂ ಸಾರ್ವಜನಿಕರ ಸಹಕಾರ ಅಗತ್ಯವಿದೆ. ನೀರನ್ನು ಹಿತಮಿತವಾಗಿ ಬಳಸುವುದು, ಪೋಲಾಗದಂತೆ ನೋಡಿಕೊಳ್ಳುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಪಂಚಾಯಿತಿ ಸಿಬ್ಬಂದಿಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪ.ಪಂ ಸಿಬ್ಬಂದಿ ರಮೇಶ ಬೇಲೇರಿ, ನಾರಾಯಣ, ಚನ್ನಯ್ಯ, ಶಿವಕುಮಾರ ಸೇರಿ ಅನೇಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-35-1346413356

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.