ಸೋಮವಾರ, ಮೇ 23, 2022
30 °C
ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಲು ಯುವ ಕಾಂಗ್ರೆಸ್ ಆಗ್ರಹ

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಪೆಟ್ರೋಲ್, ಡಿಸೇಲ್‌, ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಗಡಿಯಾರ ಕಂಭದಿಂದ ಅಶೋಕ ವೃತ್ತದವರೆಗೆ ಅಡುಗೆ ಅನಿಲ ಸಿಲಿಂಡರ್ ಹೊತ್ತುಕೊಂಡು ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಗಲಿಬಿ ಮಾತನಾಡಿ, ದೇಶದ ಪ್ರತಿಷ್ಠಿತ ಸಂಸ್ಥೆಗಳನ್ನು ಮಾರಾಟ ಮಾಡುತ್ತಿರುವುದಲ್ಲದೇ ನಿತ್ಯ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಬರೆ ಎಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನವಿರೋಧಿ ಕಾರ್ಯಕ್ರಮಗಳನ್ನು ಮುನ್ನೆಲೆಗೆ ತರುವ ಮೂಲಕ ಅಭಿವೃದ್ಧಿಯನ್ನು ಮರೆಮಾಚಿ ಕೋಮು ಸಂಘರ್ಷಕ್ಕೆ ಕಾರಣವಾಗುತ್ತಿದ್ದಾರೆ. ನಿರುದ್ಯೋಗ, ಹಸಿವು, ಬಡತನ, ಉದ್ಯೋಗದ ಯಾವುದೇ ವಿಷಯಗಳನ್ನು ಪ್ರಸ್ತಾಪ ಮಾಡದೇ ದೇಶವನ್ನು ಅಧೋಗತಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಶಾ ಮಾತನಾಡಿದರು.

ಯುವ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಮೋರ್ಚಾ ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.