ಪುಷ್ಕರ ಸ್ನಾನಕ್ಕೆ ತೆರಳಿದ ಯುವಕ ನೀರು ಪಾಲು

ಗಂಗಾವತಿ: ತುಂಗಭದ್ರಾ ಪುಷ್ಕರ ಸ್ನಾನಕ್ಕೆ ಕುಟುಂಬದೊಂದಿಗೆ ತೆರಳಿದ್ದ ಯುವಕನೊಬ್ಬ ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಬುಧವಾರ ನಡೆದಿದೆ.
ತಾಲ್ಲೂಕಿನ ಬರಗೂರು ಕ್ಯಾಂಪಿನ ಸಾಯಿಚರಣ್ (21) ಮೃತಪಟ್ಟ ಯುವಕ. ಪವಿತ್ರ ಪುಷ್ಕರ ಸ್ನಾನ ಮಾಡಲು ಕುಟುಂಬದೊಂದಿಗೆ ಆಗಮಿಸಿದಾಗ ನೀರಿನಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾನೆ ಎಂದು ಗ್ರಾಮೀಣಾ ಠಾಣಾ ಪಿಎಸ್ಐ ದೊಡ್ಡಪ್ಪ ತಿಳಿಸಿದ್ದಾರೆ.
ಈ ಕುರಿತು ಗ್ರಾಮೀಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.