ಕೊಪ್ಪಳ: ನಗರದಲ್ಲಿರುವ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಸೋಮವಾರ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಪಾಲಕರ ಹೋರಾಟ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಶುಲ್ಕ ಹೆಚ್ಚಳವನ್ನು ಕೈಬಿಡಬೇಕು ಎಂಬುದು ಸೇರಿದಂತೆ ಒಟ್ಟು ಆರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸದಸ್ಯರು ಮನವಿ ಮಾಡಿದರು.

ಶಾಲೆಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು. ಸರ್ಕಾರದ ನಿಯಮಗಳ ಪ್ರಕಾರ ಅರ್ಹ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಹಾಗೂ ಪ್ರತಿ ತರಗತಿಯಲ್ಲಿ ನಿಗದಿತ ಸಂಖ್ಯೆಯ ಮಕ್ಕಳಿಗೆ ಪ್ರವೇಶ ನೀಡಬೇಕು ಎಂದು ಒತ್ತಾಯಿಸಿದರು.

ಶಾಲೆಯ ಆವರಣದಲ್ಲಿರುವ ಕ್ಲಬ್ನ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು, ಕುಡಿಯುವ ನೀರಿನ ವ್ಯವಸ್ಥೆ, ಸಮತಟ್ಟಾದ ಮೈದಾನ ನಿರ್ಮಾಣ, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು, ಪ್ರತಿ ಎರಡು ತಿಂಗಳಿಗೊಮ್ಮೆ ಪಾಲಕರ ಸಭೆ ಕರೆದು ಶಿಕ್ಷಣದ ಗುಣಮಟ್ಟ, ಶಾಲೆಯ ಅಭಿವೃದ್ಧಿ ಹಾಗೂ ಕುಂದು-ಕೊರತೆ ಬಗಗೆ ಚರ್ಚಿಸಬೇಕು ಎಂದೂ ಒತ್ತಾಯಿಸಿದರು.

ಸಮಿತಿಯ ಬಸವರಾಜ ಶೀಲವಂತರ, ಪ್ರಕಾಶ ಕಂದಕೂರು, ಜಿ.ಎಸ್.ಗೋನಾಳ, ರಾಮಣ್ಣ ಕಂದಾರಿ, ನನ್ನೂಸಾಬ ನೀಲಿ, ಅಂಬುಜಾ ಪಾಟೀಲ, ರಮೇಶ ಮೇಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.