ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಡ್‌ಕ್ರಾಸ್‌ ಸಂಸ್ಥೆಯ ಸಹಯೋಗ l ಕೆಪಿಟಿಸಿಎಲ್-ಬೆಸ್ಕಾಂ ವತಿಯಿಂದ ರಕ್ತದಾನ ಶಿಬಿರ

150ಕ್ಕೂ ಅಧಿಕ ಜನರು ಭಾಗಿ
Last Updated 2 ಮೇ 2020, 21:05 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಲಾಕ್‍ಡೌನ್‌ನಿಂದ ರೋಗಿಗಳಿಗೆ ರಕ್ತದ ಕೊರತೆ ಎದುರಾಗಿರುವ ಹಿನ್ನೆಲೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ಬೆಸ್ಕಾಂ ಹಾಗೂ ರೆಡ್‍ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಯಿತು.

ಶಿಬಿರವನ್ನು ಉದ್ಘಾಟಿಸಿದ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ‘ಎಲ್ಲ ಜಿಲ್ಲೆಗಳಲ್ಲೂ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುವುದು' ಎಂದರು.

ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕಿ ಮಂಜುಳಾ, ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ಸಿಬ್ಬಂದಿ ಸೆರಿದಂತೆ ಸುಮಾರು 150ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಶಗೌಡ, ಕೆಪಿಟಿಸಿಎಲ್ ಆಡಳಿತ ವಿಭಾಗದ ನಿರ್ದೇಶಕ ಜಿ.ಎಂ.ಗಂಗಾಧರಸ್ವಾಮಿ, ನೌಕರರ ಸಂಘದ ಅಧ್ಯಕ್ಷ ಟಿ.ಆರ್.ರಾಮಕೃಷ್ಣಯ್ಯ, ಎಂಜಿನಿಯರ್‌ಗಳ ಸಂಘದ ಅಧ್ಯಕ್ಷ ಟಿ.ಎಂ.ಶಿವಪ್ರಕಾಶ್, ಲೆಕ್ಕಾಧಿಕಾರಿಗಳ ಸಂಘದ ಕಾರ್ಯಧ್ಯಕ್ಷ ಮಂಜಪ್ಪ, ಡಿಪ್ಲೊಮೊ ಎಂಜಿನಿಯರ್‌ಗಳ ಸಂಘದ ಅಧ್ಯಕ್ಷ ಲೋಕೇಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT