ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆರಿಗೆ ವಾರ್ಡ್‌ ಸುರಕ್ಷತೆಯತ್ತಲೂ ಗಮನ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ
Last Updated 8 ಏಪ್ರಿಲ್ 2020, 12:34 IST
ಅಕ್ಷರ ಗಾತ್ರ

ಶಿವಮೊಗ್ಗ:ಅಗ್ನಿ ಅವಘಡದಿಂದಹಾನಿಯಾದ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ದುರಸ್ತಿ ಕಾರ್ಯ ತಕ್ಷಣ ಆರಂಭಿಸಬೇಕು.ಅದೇಕಟ್ಟಡದಲ್ಲಿರುವ ಹೆರಿಗೆ ವಾರ್ಡ್‍ನ ಸುರಕ್ಷತೆಕುರಿತು ಪರಿಶೀಲಿಸಬೇಕು ಎಂದುಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿಬುಧವಾರ ನಡೆದಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಲೋಕೋಪಯೋಗಿ ಇಲಾಖೆ ತಂಡ ಸಿವಿಲ್ ಹಾಗೂ ಎಲೆಕ್ಟ್ರಿಕಲ್ ಅಂಶಗಳ ತಪಾಸಣೆ ನಡೆಸಬೇಕು.ಸುರಕ್ಷತೆ ಖಾತ್ರಿಪಡಿಸಬೇಕು.ಘಟನೆಯ ತನಿಖೆ ನಡೆಸಲು ಈಗಾಗಲೇ ಶಿವಮೊಗ್ಗ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿಯ ವರದಿ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.

ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗ ಸಿದ್ಧವಾಗುವ ತನಕ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆಗೆ ಅವಕಾಶ ಕಲ್ಪಿಸಲಾಗಿದೆ.ಈಗಾಗಲೇ ಎರಡು ಆಸ್ಪತ್ರೆಗಳ ಸೇವೆ ಪಡೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದರು.

ಹಾಪ್‍ಕಾಮ್ಸ್ ಮಳಿಗೆ: ಶಿವಮೊಗ್ಗ ನಗರದಲ್ಲಿ ಹಾಪ್‍ಕಾಮ್ಸ್ ಮಳಿಗೆಗಳನ್ನು ಆರಂಭಿಸಲು 15 ಸ್ಥಳಗಳನ್ನು ಗುರುತಿಸಲಾಗಿದೆ.ಅನುಮೋದನೆಗಾಗಿ ನಿರ್ದೇಶನಾಲಯಕ್ಕೆ ಕಳುಹಿಸಲಾಗಿದೆ. ಇನ್ನೂ 10 ಸ್ಥಳಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿಸಿಇಒಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT