ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಗಳ ಮೂಲ ಸೌಕರ್ಯ ಸವಾಲಿನ ಕೆಲಸ: ಈಶ್ವರಪ್ಪ

Last Updated 21 ಜನವರಿ 2020, 14:48 IST
ಅಕ್ಷರ ಗಾತ್ರ

ಶಿವಮೊಗ್ಗ: ಬೆಳೆಯುತ್ತಿರುವ ನಗರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಒದಗಿಸುವುದು ಸವಾಲಿನ ಕೆಲಸ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಲ್ಲಿಶಿವಮೊಗ್ಗ ನಗರಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಿರುವ ರಸ್ತೆ, ಚರಂಡಿಗಳ ಅಭಿವೃದ್ಧಿಗಾಗಿ ತಯಾರಿಸಲಾದ ಕ್ರಿಯಾಯೋಜನೆಯ ಅನುಮೋದನೆ ಸಭೆಯಲ್ಲಿ ಅವರು ಮಾತನಾಡಿದರು.

ಈ ಯೋಜನೆಗೆ ರಾಜ್ಯದ 10 ಜಿಲ್ಲೆಗಗಳು ಆಯ್ಕೆಯಾಗಿವೆ.ಮೈಸೂರು, ಕಲಬುರಗಿ, ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಿಗೆ ತಲಾ ₨ 150 ಕೋಟಿ ಹಾಗೂ ಮಂಗಳೂರು, ಬೆಳಗಾವಿ, ದಾವಣಗೆರೆ, ಬಳ್ಳಾರಿ, ವಿಜಯಪುರ, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ತಲಾ ₨ 125 ಕೋಟಿ ಅನುದಾನ ಮಂಜೂರಾಗಿದೆ ಎಂದು ಮಾಹಿತಿ ನೀಡಿದರು.

ಸ್ಮಾರ್ಟ್‍ಸಿಟಿ ಯೋಜನೆ ವ್ಯಾಪ್ತಿಯ 6 ವಾರ್ಡ್‌ಗಳನ್ನು ಹೊರತುಪಡಿಸಿ, ಉಳಿದ ವಾರ್ಡ್‌ಗಳಿಗೆತಲಾ ₨ 1 ಕೋಟಿ ಮಂಜೂರು ಮಾಡಬೇಕು.ಪರಿಶಿಷ್ಟ ಜಾತಿ ಮತ್ತು ಪಂಗಡದ ವಾರ್ಡ್‌ಗಳಿಗೆಪ್ರಾತಿನಿಧ್ಯ ಇರುವಂತೆ ನೋಡಿಕೊಳ್ಳಬೇಕು ಎಂದು ಆಯುಕ್ತರಿಗೆ ಸೂಚಿಸಿದರು.

ಈ ಯೋಜನೆ ಅನುಷ್ಠಾನಕ್ಕೆ ಪಾಲಿಕೆಯ ಎಲ್ಲಾ ಸದಸ್ಯರು, ಶಾಸಕರಿಗೆ ಮಾರ್ಗಸೂಚಿ ನೀಡಬೇಕು. ಪ್ರಸ್ತಾವ ಸಲ್ಲಿಸಬೇಕು. ಕೈಗೊಳ್ಳುವ ಕಾಮಗಾರಿ₨ 1 ಕೋಟಿಒಳಗಿರಬೇಕು.ಈ ಅನುದಾನದಲ್ಲಿ ಅಮೃತ ಯೋಜನೆಯ ಅನುಷ್ಠಾನಕ್ಕೆ ₨ 13 ಕೋಟಿ ಕಾಯ್ದಿರಿಸಲಾಗಿದೆ. ನಗರದ ಉದ್ಯಾನಗಳ ಅಭಿವೃದ್ಧಿಗೂ ₨ 2.75 ಕೋಟಿ ಖರ್ಚು ಮಾಡಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ನಗರ ಪಾಲಿಕೆ ಉಪ ಮೇಯರ್ ಎಸ್.ಎನ್. ಚನ್ನಬಸಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಜೆ.ಅನುರಾಧಾ, ಯೋಜನಾ ನಿರ್ದೇಶಕ ನಾಗೇಂದ್ರ ಎಫ್ ಹೊನ್ನಳ್ಳಿ, ಆಯುಕ್ತ ಚಿದಾನಂದ ಎಸ್.ವಟಾರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT